Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:3 - ಕನ್ನಡ ಸತ್ಯವೇದವು J.V. (BSI)

3 ಘನವಂತ, ಮಂತ್ರಾಲೋಚಕ, ತಾಂತ್ರಿಕ, ಮಾಂತ್ರಿಕ, ಇವರೆಲ್ಲರನ್ನೂ ತೊಲಗಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪಂಚಾಶತಾಧಿಪತಿ, ಘನವಂತನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರೆಲ್ಲರನ್ನು ತೊಲಗಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದಳಪತಿಗಳು ಮತ್ತು ಗಣ್ಯವ್ಯಕ್ತಿಗಳು, ಮಂತ್ರಿಗಳು ಮತ್ತು ಮಂತ್ರತಂತ್ರದವರು - ಎಲ್ಲರನ್ನು ತೊಲಗಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರು ಸೇನಾಪತಿಗಳನ್ನೂ ಸರ್ಕಾರದ ಅಧಿಪತಿಗಳನ್ನೂ ತೆಗೆದುಬಿಡುವನು. ಆತನು ಉತ್ತಮ ಸಲಹೆಗಾರರನ್ನೂ ಮಾಂತ್ರಿಕರನ್ನೂ ಭವಿಷ್ಯ ಹೇಳುವವರನ್ನೂ ತೊಲಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೇನಾಪತಿ, ಅಧಿಕಾರಿ, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:3
11 ತಿಳಿವುಗಳ ಹೋಲಿಕೆ  

ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇವಿುಸುವನು. ಇನ್ನು ಕೆಲವರು ಅವನ ಭೂವಿುಯನ್ನು ಉಳುವವರೂ ಪೈರನ್ನು ಕೊಯ್ಯುವವರೂ ಯುದ್ಧಾಯುಧ, ರಥಸಾಹಿತ್ಯ ಇವುಗಳನ್ನು ಮಾಡುವವರೂ ಆಗಬೇಕು.


ಮತ್ತು ಅವನು ಜೆಬಹ, ಚಲ್ಮುನ್ನ ಎಂಬವರನ್ನು - ನೀವು ತಾಬೋರದಲ್ಲಿ ಕೊಂದು ಹಾಕಿದ ಮನುಷ್ಯರು ಹೇಗಿದ್ದರು ಎಂದು ಕೇಳಲಾಗಿ ಅವರು ಅವನಿಗೆ - ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು ಎಂದು ಉತ್ತರಕೊಟ್ಟರು.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿಯೂ ಉಪಾಧಿಕಾರಿಗಳನ್ನಾಗಿಯೂ ನೇವಿುಸಿದೆನು.


ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ ದೇವಭಕ್ತರೂ ನಂಬಿಗಸ್ತರೂ ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇವಿುಸಬೇಕು.


ಆದರೆ ಮೋಶೆ ಯೆಹೋವನಿಗೆ - ಸ್ವಾಮೀ, ನಾನು ಮೊದಲಿನಿಂದಲೂ ನೀನು ದಾಸನ ಸಂಗಡ ಮಾತಾಡಿದ ಮೇಲೆಯೂ ವಾಕ್ಚಾತುರ್ಯವಿಲ್ಲದವನು; ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಎಂದು ಹೇಳಲು ಯೆಹೋವನು ಅವನಿಗೆ -


ಬಲಿಷ್ಟನಾದರೆ ದೇಶವೇ ಅವನದು, ಅಲ್ಲಿ ಸನ್ಮಾನಯೋಗ್ಯನಾಗಿ ವಾಸಿಸತಕ್ಕವನು ಅವನೇ.


ಇದಲ್ಲದೆ ಶೂರ, ಭಟ, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ, ಪಂಚದಶಾಧಿಪತಿ,


ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇವಿುಸುವೆನು, ಬಾಲಚೇಷ್ಟೆಯು ಅದನ್ನಾಳುವದು.


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವದು ಖಂಡಿತ; ಘನವಂತರು ಹಸಿಯುವರು, ಸಾಮಾನ್ಯರು ಬಾಯಾರುವರು.


(ಘನಹೊಂದಿದ ಹಿರಿಯನೇ ತಲೆ; ಸುಳ್ಳುಬೋಧನೆ ಮಾಡುವ ಪ್ರವಾದಿಯೇ ಬಾಲ).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು