Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:4 - ಕನ್ನಡ ಸತ್ಯವೇದವು J.V. (BSI)

4 ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇವಿುಸುವೆನು, ಬಾಲಚೇಷ್ಟೆಯು ಅದನ್ನಾಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು, “ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇಮಿಸುವೆನು, ಬಾಲಕರು ಅದನ್ನು ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಅವರಿಗೆ ಬಾಲಕರನ್ನು ಪಾಲಕರನ್ನಾಗಿಸಿ, ಹಸುಳೆಗಳು ಅವರನ್ನು ಆಳುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಹೇಳುವುದೇನೆಂದರೆ: “ನಾನು ಬಾಲಕರನ್ನು ನಿಮ್ಮ ನಾಯಕರನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಬಾಲಕರನ್ನು ಅವರ ಪ್ರಭುಗಳನ್ನಾಗಿ ಮಾಡಿ, ಮಕ್ಕಳು ಅವರ ಮೇಲೆ ಆಳುವಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:4
12 ತಿಳಿವುಗಳ ಹೋಲಿಕೆ  

ಎಲೆ ದೇಶವೇ ನಿನ್ನ ರಾಜನು ಬಾಲನಾಗಿದ್ದು ಪ್ರಭುಗಳು ಹೊತ್ತಾರೆ ಔತಣಕ್ಕೆ ಕೂತುಕೊಂಡರೆ ನಿನಗೆ ದೌರ್ಭಾಗ್ಯವೇ.


ಯೆಹೋಯಾಕೀನನು ಅರಸನಾದಾಗ ಎಂಟು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಯೋಷೀಯನು ಅರಸನಾದಾಗ ಎಂಟು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಮೂವತ್ತೊಂದು ವರುಷ ಆಳಿದನು.


ಮನಸ್ಸೆಯು ಅರಸನಾದಾಗ ಹನ್ನೆರಡು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಐವತ್ತೈದು ವರುಷ ಆಳಿದನು.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು.


ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತಮೂರು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಮೂರು ತಿಂಗಳು ಆಳಿದನು.


ಘನವಂತ, ಮಂತ್ರಾಲೋಚಕ, ತಾಂತ್ರಿಕ, ಮಾಂತ್ರಿಕ, ಇವರೆಲ್ಲರನ್ನೂ ತೊಲಗಿಸಿಬಿಡುವೆನು.


ನನ್ನ ಜನರನ್ನೋ ಬಾಧಿಸುವವರು ಹುಡುಗರು, ಆಳುವವರು ಹೆಂಗಸರು. ನನ್ನ ಜನರೇ! ನಿಮ್ಮನ್ನು ನಡಿಸುವವರು ದಾರಿತಪ್ಪಿಸುವವರಾಗಿದ್ದಾರೆ, ನೀವು ನಡೆಯತಕ್ಕ ದಾರಿಯನ್ನು ಅಳಿಸಿಬಿಟ್ಟಿದ್ದಾರೆ.


ಇದಲ್ಲದೆ ಯೆಹೋವನು ಹೀಗನ್ನುತ್ತಾನೆ - ಚೀಯೋನಿನ ಹೆಂಗಸರು ವಯ್ಯಾರವುಳ್ಳವರಾಗಿ ಕತ್ತು ತೂಗುತ್ತಾ ಕಡೆಗಣ್ಣುಹಾಕುತ್ತಾ ಕುಲುಕಿ ಹೆಜ್ಜೆಯಿಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವದರಿಂದ


ಯೆಹೋವನು ಯೆರೂಸಲೇವಿುನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರಿಗಿಬಿದ್ದದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು