Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಹೀಗೆ ನುಡಿಯುತ್ತಾನೆ :- ದ್ರೋಹಿಗಳಾದ [ನನ್ನ] ಮಕ್ಕಳ ಗತಿಯನ್ನು ಏನು ಹೇಳಲಿ! ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಸಾಗಿಸಿ ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೆಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೀಗೆನ್ನುತ್ತಾನೆ: “ಈ ಮಕ್ಕಳನ್ನು ನೋಡಿರಿ, ಅವರು ನನಗೆ ವಿಧೇಯರಾಗುತ್ತಿಲ್ಲ. ಅವರು ಯೋಜನೆಗಳನ್ನು ತಯಾರಿಸುತ್ತಾರೆ, ಆದರೆ ನನ್ನಿಂದ ಸಹಾಯವನ್ನು ಕೇಳುತ್ತಿಲ್ಲ. ಅವರು ಬೇರೆ ರಾಜ್ಯಗಳೊಂದಿಗೆ ಒಪ್ಪಂದ ಮಾಡುತ್ತಾರೆ; ಆದರೆ ನನ್ನ ಆತ್ಮವು ಅದಕ್ಕೆ ಒಪ್ಪುತ್ತಿಲ್ಲ. ಈ ಜನರು ತಮ್ಮ ಪಾಪಗಳಿಗೆ ಇನ್ನೂ ಹೆಚ್ಚು ಪಾಪವನ್ನು ಕೂಡಿಸಿಟ್ಟುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ದ್ರೋಹಿಗಳಾದ ಮಕ್ಕಳಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಆಲೋಚನೆಯನ್ನು ಮಾಡುತ್ತಾರೆ ಆದರೆ ನನ್ನಿಂದಲ್ಲ. ನನ್ನ ಆತ್ಮ ಪ್ರೇರಿತರಾಗದೆ ಉಪಾಯಗಳನ್ನು ಮಾಡುತ್ತಾರೆ, ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:1
48 ತಿಳಿವುಗಳ ಹೋಲಿಕೆ  

ನನ್ನನ್ನು ತೊರೆದು ಮನಸ್ಸುಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈ ಚಾಚಿ ಕರೆದೆನು.


ಆಕಾಶಮಂಡಲವೇ, ಆಲಿಸು! ಭೂಮಂಡಲವೇ, ಕೇಳು! ಯೆಹೋವನು ಮಾತಾಡುತ್ತಿದ್ದಾನೆ; ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ಅವರು ನನ್ನ ಕಡೆಯಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಜುವದಕ್ಕೆ ಅಗಾಧೋಪಾಯ ಮಾಡಿ ನಮ್ಮನ್ನು ಯಾರು ನೋಡಿಯಾರು, ಯಾರು ತಿಳಿದಾರು ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡಿಸುವವರ ಗತಿಯನ್ನು ಏನು ಹೇಳಲಿ!


ಆದರೆ ದುಷ್ಟರೂ ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ನಿನ್ನ ಹಣೆಯನ್ನು ಕಗ್ಗಲ್ಲಿಗಿಂತ ಕಠಿನವಾದ ವಜ್ರದಷ್ಟು ಕಠಿನಪಡಿಸಿದ್ದೇನೆ; ಅವರು ದ್ರೋಹಿವಂಶದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಬೆಚ್ಚದಿರು.


ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನನಗೆ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲ್ಯರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನಗೆ ಅಪರಾಧಮಾಡುತ್ತಲೇ ಇದ್ದಾರೆ.


ಈ ಜನರ ಹೃದಯವೋ [ನನ್ನ] ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.


ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರಷ್ಟೆ;


ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ - ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವದು ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶನವನ್ನುಂಟುಮಾಡಾನು.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನ ಆಜ್ಞೆಯನ್ನು ಉಲ್ಲಂಘಿಸುವವರೇ.


ಆ ನಗರಿಯು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ಅನ್ನುತ್ತಾನೆ.


ಮತ್ತು ಒಬ್ಬ ಪುರುಷನು ಗಾಳಿಯಲ್ಲಿ ಮರೆಯಂತೆಯೂ ಅತಿವೃಷ್ಟಿಯಲ್ಲಿ ಆವರಣದ ಹಾಗೂ ಮರುಭೂವಿುಯಲ್ಲಿ ನೀರಿನ ಕಾಲುವೆಗಳ ಪ್ರಕಾರವೂ ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.


ಇವರು ಯಾವದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.


ಚೀಯೋನ್ ಪರ್ವತದ ಸಂಪೂರ್ಣ ಮಂದಿರದ ಮೇಲೆಯೂ ಅಲ್ಲಿನ ಕೂಟಗಳ ಮೇಲೆಯೂ ಹಗಲಲ್ಲಿ ಧೂಮಮೇಘವನ್ನು, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನು, ಉಂಟು ಮಾಡುವನು. [ಈ] ಪ್ರಭಾವದ ಮೇಲೆಲ್ಲಾ ಆವರಣವಿರುವದು.


ಏಕೆ ದ್ರೋಹವನ್ನು ಹೆಚ್ಚಿಸಿ ಹೆಚ್ಚಿಸಿ ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.


ಅಯ್ಯೋ, ಅಕಾರ್ಯಗಳೆಂಬ ಹಗ್ಗಗಳಿಂದ ಅಪರಾಧ ದಂಡನೆಯನ್ನು, ತೇರನ್ನು ಹೊರಜಿಯಿಂದಲೋ ಎಂಬಂತೆ ಪಾಪದ ಫಲವನ್ನು ತಮ್ಮ ಕಡೆಗೆ ಎಳೆದುಕೊಳ್ಳುತ್ತಾ ಆತನು ತ್ವರೆಪಡಲಿ,


ಒಬ್ಬನು ಚಾಚಿಕೊಂಡು ಮಲಗೇನಂದರೆ ಹಾಸಿಗೆಯ ಉದ್ದ ಸಾಲದು; ಮುದುರಿಕೊಂಡು ಮಲಗೇನಂದರೆ ಹೊದಿಕೆಯ ಅಗಲ ಸಾಲದು.


ನೀವು ನಿಮ್ಮೊಳಗೆ - ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಅಸತ್ಯವನ್ನು ಆಶ್ರಯಿಸಿಕೊಂಡು ಮೋಸವನ್ನು ಮರೆ ಹೊಕ್ಕಿದ್ದೇವಲ್ಲಾ ಅಂದುಕೊಂಡದರಿಂದ


ಲೊಚಗುಟ್ಟುವ ಪಿಟಿಪಿಟಿಗುಟ್ಟುವ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸಿರಿ ಎಂದು ಒಂದು ವೇಳೆ ನಿಮಗೆ ಹೇಳಾರು. ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವದು ಯುಕ್ತವೋ?


ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದಿರಿ.


ಈಗ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲ್ಯರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಲ್ಲಾ.


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗಂದನು -


ಯೆಹೋವನು ಹೀಗನ್ನುತ್ತಾನೆ - ಮಾನವಮಾತ್ರದವರಲ್ಲಿ ಭರವಸವಿಟ್ಟು ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ತನು.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ವಿಚಾರಿಸುವದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ - ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವದು.


ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು - ಐಗುಪ್ತಕ್ಕೆ ಹೋಗಬೇಡಿರಿ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿವಸ [ಆ ಮಾತನ್ನು] ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.


ಅಲ್ಲಿ ಆತನು ನನಗೆ - ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ;


ಈ ದ್ರೋಹಿವಂಶಕ್ಕೆ ದೃಷ್ಟಾಂತವನ್ನೆತ್ತಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;


ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸವಾಗದು; ಮತ್ತು ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲ್ಯರಲ್ಲಿ ಐಗುಪ್ತದಿಂದ ಇನ್ನು ಹುಟ್ಟದು. ನಾನೇ ಯೆಹೋವನು ಎಂದು ಅವರಿಗೆ ಮನದಟ್ಟಾಗುವದು.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ


ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.


ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ! ಐಗುಪ್ತದ ಅರಸನಾದ ಫರೋಹನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವದು.


ಇದೂ ನಿನಗೆ ಅಸಾಧ್ಯವಾಗುವದಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವದು ಹೇಗೆ? ರಥಾಶ್ವಬಲಗಳ ವಿಷಯವಾಗಿ ಐಗುಪ್ತ್ಯರನ್ನು ನಂಬಿರುತ್ತೀಯೆಂದು ಕಾಣುತ್ತದೆ.


ಪಾಪಿಷ್ಠಜನವೇ, ಅಧರ್ಮಭಾರ ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನನ್ನು ತೊರೆದಿದ್ದಾರೆ, ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಧಿಕ್ಕರಿಸಿದ್ದಾರೆ, ಆತನಿಗೆ ಬೆನ್ನುಮಾಡಿ ಬೇರೆಯಾಗಿದ್ದಾರೆ.


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸಪಡುತ್ತಾರೆ; ಆದರೆ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೆ ದೃಷ್ಟಿಯಿಡುವದಿಲ್ಲ, ಯೆಹೋವನನ್ನು ಆಶ್ರಯಿಸುವದಿಲ್ಲ;


ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್‍ನದಿಯ ನೀರನ್ನು ಕುಡಿಯಬೇಕಾದದ್ದೇನು? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? [ಯೂಫ್ರೇಟೀಸ್] ನದಿಯ ಜಲವನ್ನು ಪಾನಮಾಡಬೇಕಾದದ್ದೇನು?


ಅದರ ದುರಾಲೋಚನೆಗಳ ನಿವಿುತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು ಅಲ್ಲಿನ ಲಾಳವಿಂಡಿಗೆಗಳನ್ನು ಧ್ವಂಸಮಾಡಿ ನುಂಗಿಬಿಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು