ಯೆಶಾಯ 30:15 - ಕನ್ನಡ ಸತ್ಯವೇದವು J.V. (BSI)15 ಇಸ್ರಾಯೇಲ್ಯರ ಸದಮಲಸ್ವಾವಿುಯಾಗಿರುವ ಕರ್ತನಾದ ಯೆಹೋವನು - ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವದು; ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ : “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನ್ನ ಒಡೆಯನೂ ದೇವರೂ ಇಸ್ರೇಲಿನ ಪರಿಶುದ್ಧನೂ ಹೇಳುವುದೇನೆಂದರೆ, “ನೀವು ನನ್ನ ಕಡೆಗೆ ತಿರುಗಿಕೊಳ್ಳುವುದಾದರೆ ನೀವು ರಕ್ಷಿಸಲ್ಪಡುವಿರಿ. ನೀವು ತಾಳ್ಮೆಯಿಂದ ನನ್ನ ಮೇಲೆ ಭರವಸೆಯಿಟ್ಟರೆ, ನೀವು ಬಲವನ್ನು ಹೊಂದುವಿರಿ.” ಆದರೆ ಹಾಗೆ ಮಾಡಲು ನಿಮಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಏಕೆಂದರೆ ಇಸ್ರಾಯೇಲಿನ ಪರಿಶುದ್ಧನಾದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು. ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ. ಅಧ್ಯಾಯವನ್ನು ನೋಡಿ |