ಯೆಶಾಯ 30:16 - ಕನ್ನಡ ಸತ್ಯವೇದವು J.V. (BSI)16 ನೀವು - ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು ಎಂದುಕೊಂಡದರಿಂದ ಓಡೇ ಹೋಗುವಿರಿ; ನೀವು - ವೇಗವಾಗಿ ಸವಾರಿಮಾಡುವೆವು ಎಂದುಕೊಂಡದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿ ಬಿಡುವರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀವು, ‘ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬದಲಿಗೆ, “ಬೇಡ ಬೇಡ, ನಾವು ಕುದುರೆಗಳ ಮೇಲೆ ಓಡಿಹೋಗುತ್ತೇವೆ,” ಎಂದುಕೊಂಡಿರಿ. ಅಂತೆಯೇ ಓಡಿಹೋಗುವಿರಿ.” ನಾವು ದೌಡೋಡುವ ಕುದುರೆಗಳ ಮೇಲೆ ಸವಾರಿಮಾಡುತ್ತೇವೆ,” ಎಂದುಕೊಂಡಿರಿ. ಅಂತೆಯೇ ದೌಡೋಡುವವರೇ ನಿಮ್ಮನ್ನು ಅಟ್ಟಿಕೊಂಡುಬರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀವು, “ನಮಗೆ ಸಹಾಯ ಬೇಡ. ಓಡಿಹೋಗಲು ಕುದುರೆಗಳು ಬೇಕು” ಎಂದು ಹೇಳುವಿರಿ. ಅದು ಸರಿಯಾದ ಮಾತು. ನೀವು ಕುದುರೆಗಳ ಮೂಲಕವೇ ಓಡುವಿರಿ. ಆದರೆ ಶತ್ರುಗಳು ನಿಮ್ಮನ್ನು ಹಿಂದಟ್ಟುವರು. ಅವರು ನಿಮ್ಮ ಕುದುರೆಗಳಿಗಿಂತ ವೇಗಶಾಲಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ನೀವು, ‘ಬೇಡವೇ ಬೇಡ. ಏಕೆಂದರೆ ನಾವು ಕುದುರೆಗಳ ಮೇಲೆ ಓಡುವೆವು,’ ಎಂದುಕೊಂಡಿದ್ದರಿಂದ ನೀವು ಓಡಿಹೋಗುವಿರಿ, ನಾವು ವೇಗವಾಗಿ ಸವಾರಿ ಮಾಡುವೆವು, ಎಂದುಕೊಂಡಿದ್ದರಿಂದ ಆ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು. ಅಧ್ಯಾಯವನ್ನು ನೋಡಿ |