Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:18 - ಕನ್ನಡ ಸತ್ಯವೇದವು J.V. (BSI)

18 ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:18
69 ತಿಳಿವುಗಳ ಹೋಲಿಕೆ  

ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


[ದೇವರ] ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು; ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು.


ಯಾಕೋಬನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.


ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು.


ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.


ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ಇದೇ ಅಭಿಪ್ರಾಯಕ್ಕೆ ಸರಿಯಾಗಿ ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.


ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಬಹಳವಾಗಿ ಮುದ್ದಿಟ್ಟನು.


ಯೆಹೋವನು ಹೀಗನ್ನುತ್ತಾನೆ - ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.


ಯೆಹೋವನನ್ನು ನಿರೀಕ್ಷಿಸಿಕೊಂಡಿರು; ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.


ಯೆಹೋವನು ಉನ್ನತೋನ್ನತನಾಗಿದ್ದಾನೆ; ಮೇಲಿನ ಲೋಕದಲ್ಲಿ ವಾಸಿಸುತ್ತಾನಷ್ಟೆ; ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.


ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ಸೈರಣೆಯಿಂದ ಸೈರಿಸಿಕೊಂಡಿದ್ದಾನೆ.


ಯಾವನು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾನೋ ಯಾವನಿಗೆ ಯೆಹೋವನು ಭರವಸವಾಗಿದ್ದಾನೋ ಅವನು ಧನ್ಯನು.


ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಕರುಣಾಸಾಗರನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.


ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಪರಿಶುದ್ಧನಾದ ದೇವರು ಧರ್ಮವನ್ನು ನಡಿಸುವದರಲ್ಲಿ ಪರಿಶುದ್ಧನೆನಿಸಿಕೊಳ್ಳುವನು.


ಇನ್ನು ಮುಂದೆ ಹವ್ಮಿುನಿಂದ ನುಡಿಯಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗುವನು.


ಆತನು ರಹಸ್ಯವಾದ ತನ್ನ ಸಂಕಲ್ಪವನ್ನು ನಮಗೆ ತಿಳಿಯಪಡಿಸುವದರ ಮೂಲಕ ವಿಶೇಷವಾದ ಜ್ಞಾನವನ್ನೂ ಬುದ್ಧಿಯನ್ನೂ ಕೊಟ್ಟು ಆ ಕೃಪೆಯನ್ನು ಇನ್ನೂ ಹೆಚ್ಚಾಗಿ ನಮಗೆ ತೋರಿಸಿದ್ದಾನೆ.


ಅಪರಾಧಗಳು ಹೆಚ್ಚಾಗಿ ಕಂಡುಬರುವ ಹಾಗೆ ಧರ್ಮಶಾಸ್ತ್ರವು ಮಧ್ಯೆ ಬಂತು. ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಆ ಕಾಲದಲ್ಲಿ ಯೆರೂಸಲೇವಿುನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದು ಇಸ್ರಾಯೇಲ್ ಜನರನ್ನು ಸಂತೈಸುವವನು ಯಾವಾಗ ಬಂದಾನೆಂದು ಹಾರೈಸುತ್ತಿದ್ದನು; ಮತ್ತು ಪವಿತ್ರಾತ್ಮಪ್ರೇರಿತನಾಗಿದ್ದನು.


ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ; ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು, ಅವರೇ ಆತನಿಗೆ ಇಷ್ಟ, ನ್ಯಾಯತೀರಿಸುವ ದೇವರು ಎಲ್ಲಿಯೋ ಎಂದು ನೀವು ಅಂದುಕೊಳ್ಳುವದರಲ್ಲಿಯೇ.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.


ಯೆಹೋವನು ಮೋಶೆಯ ಎದುರಾಗಿ ಹೋಗುತ್ತಾ ಪ್ರಕಟವಾಗಿ ಹೇಳಿದ್ದೇನಂದರೆ :- ಯೆಹೋವ, ಯೆಹೋವ ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಫಶಾಂತನೂ ಪ್ರೀತಿಯೂ ನಂಬಿಕೆಯೂ ಉಳ್ಳವನು;


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ಯೆಹೋವನು ನನಗೆ ಹೇಳಿರುವದೇನಂದರೆ, ಬಿಸಿಲಿನಲ್ಲಿ ಜಳಜಳಿಸುವ ದಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂಬದೇ.


ಅರಸನ ಬಲವು ನೀತಿಯಲ್ಲಿ ಆಸಕ್ತವಾಗಿದೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.


ಹೀಗಿರಲು ಆತನು ಕಾಣುವದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಬಿದ್ದೇ ಇದೆ, ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳಾನೇ?


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ಆಹಾ, ನಾನು ಅವಳನ್ನು ಒಲಿಸಿ ಅಡವಿಗೆ ಕರಕೊಂಡು ಹೋಗಿ ಅವಳೊಂದಿಗೆ ಹೃದಯಂಗಮವಾಗಿ ಮಾತಾಡುವೆನು.


ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿಹಿಡಿದಿದ್ದೆನು. [ಈಗ] ಹೆರುವವಳಂತೆ ಮೂಲುಗುತ್ತಾ ಅಸುರುಸಿರಿನೊಡನೆ ಏದುವೆನು.


ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು [ಏರುವರು]; ಓಡಿ ದಣಿಯರು, ನಡೆದು ಬಳಲರು.


ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಸಾಮಾನ್ಯರ ಗರ್ವವು ಕುಗ್ಗುವದು, ಮುಖಂಡರ ಅಹಂಕಾರವೂ ತಗ್ಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ನಾನು ನ್ಯಾಯವನ್ನು ನೂಲನ್ನಾಗಿಯೂ ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಅಸತ್ಯದ ಆಶ್ರಯವನ್ನು ಬಡಿದುಕೊಂಡು ಹೋಗುವದು, ಜಲಪ್ರವಾಹವು [ಮೋಸದ] ಮರೆಯನ್ನು ಮುಣುಗಿಸುವದು.


ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನು ಕಾದುಕೊಂಡಿದ್ದೇವೆ; ಪ್ರತಿ ಮುಂಜಾನೆಯೂ ನಮಗೆ ಭುಜಬಲವಾಗಿಯೂ ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.


ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.


ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು ನನ್ನ ಕೀರ್ತಿಗೆ ಕಳಂಕಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.


ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ, ಕೊಳ್ಳೆಯನ್ನೂ ಅನ್ಯಾಯವನ್ನೂ ದ್ವೇಷಿಸುತ್ತೇನೆ; ಸತ್ಯಸಂಧತೆಯನ್ನು ಅನುಸರಿಸಿ ಇವರ ನಷ್ಟಕ್ಕೆ ಪ್ರತಿಫಲವನ್ನು ಕೊಟ್ಟು ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.


ಹತ್ತು ದಿನಗಳಾದ ಮೇಲೆ ಯೆಹೋವನು ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು.


ಕಾದುಕೊಂಡು ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯ ಮಟ್ಟಿಗೆ ತಾಳಿರುವವನು ಧನ್ಯನು.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.


ನಾನು ಸರ್ವದಾ ವ್ಯಾಜ್ಯವಾಡೆನು, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯಾತ್ಮವೂ ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು