Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:30 - ಕನ್ನಡ ಸತ್ಯವೇದವು J.V. (BSI)

30 ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರಿದ ಮೋಡ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಯೆಹೋವ ದೇವರು ತನ್ನ ಗಂಭೀರವಾದ ಧ್ವನಿಯನ್ನು ಕೇಳ ಮಾಡಿ, ತೀವ್ರ ಕೋಪ, ದಹಿಸುವ ಅಗ್ನಿ ಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ, ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:30
50 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ಆ ನಗರಿಯನ್ನು ರಕ್ಷಿಸುವನು.


ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಯೆಹೋವನು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿ ಅನೇಕರನ್ನು ಸಾಯಿಸಿದನು. ಇಸ್ರಾಯೇಲ್ಯರ ಕತ್ತಿಯಿಂದ ಸಂಹೃತರಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿ.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.


ಆಹಾ, ಕರ್ತನು ಒಬ್ಬ ಮಹಾ ಬಲಿಷ್ಠನನ್ನು ನೇವಿುಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ನಾಶಕವಾದ ಬಿರುಗಾಳಿಯೋಪಾದಿಯಲ್ಲಿಯೂ ಮುಣುಗಿಸುವ ಅತಿಧಾರಾವೃಷ್ಟಿಯ ಹಾಗೂ ಬಲಾತ್ಕಾರದಿಂದ [ಆ ಪಟ್ಟಣವನ್ನು] ನೆಲಕ್ಕೆ ಬೀಳಿಸುವನು.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು;


ಬೆಂಕಿಗೆ ಕರಗಿದ ಮೇಣದಂತೆಯೂ ಜರಿಯಲ್ಲಿ ಹೊಯ್ದ ನೀರಿನ ಹಾಗೂ ಪರ್ವತಗಳು ಆತನ ಹೆಜ್ಜೆಗೆ ಕರಗಿ ಹರಿಯುತ್ತವೆ, ತಗ್ಗುಗಳು ಸೀಳಿಹೋಗುತ್ತವೆ.


ಆದರೆ ಕಲ್ಮಳೆಸುರಿಯಲು ವನವು ಹಾಳಾಗುವದು; ಪಟ್ಟಣವು ನೆಲಸಮವಾಗುವದು,


ಆತನ ಕಣ್ಣುಗಳು ಬೆಂಕಿಯ ಉರಿಯಂತೆಯೂ ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.


ಆತನು ತನ್ನ ಭುಜಪರಾಕ್ರಮವನ್ನು ತೋರಿಸಿ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.


ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಪ್ರಾಕಾರದ ಪರ್ಯಂತವೂ ಕೇಳಿಸಿತು.


ಯೆಹೋವನು ತನ್ನ ಬಲಗೈ ಮೇಲೆ, ತನ್ನ ಭುಜಬಲದ ಮೇಲೆ, ಆಣೆಯಿಟ್ಟು - ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡಲೇ ಕೊಡೆನು. ನೀನು ದುಡಿದ ದ್ರಾಕ್ಷಾರಸವನ್ನು ಅನ್ಯರು ಕುಡಿಯುವದೇ ಇಲ್ಲ;


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;


ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡಿಸಿದ್ದಾನೆ. ಆತನ ಬಲಗೈಯೂ ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.


ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿಹೋಯಿತು.


ಅನಂತರ ಆತನು ಸಿಟ್ಟಾಗಿ - ನಾನು ನೇವಿುಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು ಎಂದು ಹೇಳಿ


ನಿನ್ನ ಕೈಯೂ ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ಸಮುವೇಲನು ಯಜ್ಞವನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕೋಸ್ಕರ ಸಮೀಪಿಸಲಾಗಿ ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲ್ಯರಿಗೆ ಸೋತು ಓಡಿಹೋಗುವಂತೆ ಮಾಡಿದನು.


ಗಾಬರಿಯೂ ಹೆದರಿಕೆಯೂ ಅವರನ್ನು ಹಿಡಿದವೆ. ನಿನ್ನ ಭುಜಬಲದ ದೆಸೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿದ್ದಾರೆ. ಅಷ್ಟರಲ್ಲಿ ಯೆಹೋವನೇ, ನೀನು ಸಂಪಾದಿಸಿಕೊಂಡ ನಿನ್ನ ಪ್ರಜೆಗಳು ಸಾಗಿಹೋಗಿ ದೇಶವನ್ನು ಸೇರುವರು.


ಮೋಶೆಯು ತನ್ನ ಕೋಲನ್ನು ಆಕಾಶಕ್ಕೆ ಚಾಚಿದಾಗ ಯೆಹೋವನು ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಉಂಟುಮಾಡಿದನು. ಸಿಡಿಲುಗಳು ನೆಲಕ್ಕೆ ಬಿದ್ದವು. ಯೆಹೋವನು ಐಗುಪ್ತದೇಶದ ಮೇಲೆ ಕಲ್ಲಿನ ಮಳೆಯನ್ನು ಸುರಿಸಿದನು. ಕಲ್ಲಿನ ಮಳೆಯು ಬಹು ಬಲವಾಗಿತ್ತು.


ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ


ಆಹಾ, ಅಶ್ಶೂರವೇ, ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೋಷವೇ!


ನೀವೋ ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ; ಇಸ್ರಾಯೇಲ್ಯರ ಶರಣನ ಸಾನ್ನಿಧ್ಯವನ್ನು ಬಯಸಿ ಯೆಹೋವನ ಪರ್ವತಕ್ಕೆ ಪಿಳ್ಳಂಗೋವಿಯ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.


ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ಶೂರ್ಯರು ಆತನ ಧ್ವನಿಯಿಂದಲೇ ಭಂಗಪಡುವರು.


ಚೀಯೋನಿನ ಪಾಪಿಗಳು ಹೆದರುತ್ತಾರೆ, ಆ ಭ್ರಷ್ಟರು ನಡುಕಕ್ಕೆ ಒಳಗಾಗಿ - ನಮ್ಮಲ್ಲಿ ಯಾರು ನುಂಗುವ ಕಿಚ್ಚಿನ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುತ್ತಾರೆ.


ಯೆಹೋವನು ಅಗ್ನಿಯಿಂದಲೂ ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹುಜನ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದುಬರುವದು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವದು, [ನನ್ನ] ರೋಷದಿಂದ ಆನೆಕಲ್ಲುಗಳು ಸುರಿಯುವವು;


ಪರ್ವತಾಗ್ರಗಳಲ್ಲಿ ಅವು ಹಾರಾಡುವ ಶಬ್ದವು ರಥಗಳ ಚೀತ್ಕಾರದಂತೆಯೂ ಕೂಳೆಯನ್ನು ನುಂಗುವ ಬೆಂಕಿಯ ಚಟಪಟ ಧ್ವನಿಯ ಹಾಗೂ ಕೇಳಿಸುತ್ತದೆ; ಅವು ವ್ಯೂಹಕಟ್ಟಿಕೊಂಡ ಪ್ರಬಲವಾದ ಸೈನ್ಯವೇ.


ನಾನು ರಬ್ಬದ ಕೋಟೆಯಲ್ಲಿ ಬೆಂಕಿಯನ್ನು ಉರಿಸುವೆನು, ಅದು ಅವರ ಅರಮನೆಗಳನ್ನು ನುಂಗಿಬಿಡುವದು; ಆ ಯುದ್ಧದಿನದಲ್ಲಿ ಆರ್ಭಟವಾಗುವದು. ಆ ಸುಂಟರಗಾಳಿಯ ದಿವಸದಲ್ಲಿ ರೋಷಮಾರುತವು ಬೀಸುವದು;


ಝಗಝಗಿಸುವ ವಿುಂಚೂ ಅದರೊಂದಿಗಿತ್ತು. ಐಗುಪ್ತ್ಯರು ಜನಾಂಗವಾದಂದಿನಿಂದಲೂ ಆ ದೇಶದಲ್ಲಿ ಅಂಥ ಘೋರವಾದ ಕಲ್ಲಿನ ಮಳೆ ಆಗಿರಲಿಲ್ಲ.


ಯೆಹೋವನು ಇಸ್ರಾಯೇಲ್ಯರ ಮುಂದೆ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಪೂರ್ಣವಾಗಿ ಸೋಲಿಸಿ ಬೇತ್‍ಹೋರೋನ್ ಎಂಬ ಗಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.


ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೆಯೋ? ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೆಯಾ?


ಹಗಲಿನ ಬಿಸಿಲಲ್ಲಿ ನೆರಳನ್ನೂ ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಮಂಟಪವಿರುವದು.


ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಅವನ ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನುಂಟುಮಾಡುವನು; ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಕೆಳಗೆ ಹತ್ತಿಕೊಳ್ಳುವದು.


ಸೇನಾಧೀಶ್ವರನಾದ ಯೆಹೋವನು ಓರೇಬನ ಬಂಡೆಯ ಹತ್ತಿರ ವಿುದ್ಯಾನ್ಯರನ್ನು ಹತಮಾಡಿದಂತೆ ಅವರ ಮೇಲೆಯೂ ಕೊರಡೆಯನ್ನು ಬೀಸುವನು; ಆತನು ದಂಡವನ್ನು ಸಮುದ್ರದ ಮೇಲೆ ಚಾಚಿ ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.


ಯೆಹೋವನು ನನಗೆ ಹೀಗೆ ಹೇಳಿದ್ದಾನೆ - ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಬಹುಮಂದಿ ಕುರುಬರು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿಜ್ವಾಲೆಯಿಂದ ಖಂಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು