Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:6 - ಕನ್ನಡ ಸತ್ಯವೇದವು J.V. (BSI)

6 ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. [ರಾಯಭಾರಿಗಳು] ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು ಮೃಗೇಂದ್ರ, ಸಿಂಹ, ವಿಷಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ ಶ್ರಮಸಂಕಟಗಳನ್ನು ಉಂಟುಮಾಡುವದಾಗಿಯೂ ಇರುವ ದೇಶದ ಮಾರ್ಗವಾಗಿ ನಿಷ್ಪ್ರಯೋಜನವಾದ ಜನಾಂಗದ ಬಳಿಗೆ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೆಗೆವಿನ ಮೃಗಗಳ ವಿಷಯವಾದ ಪ್ರವಾದನೆ: ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿಗಳ ಬೆನ್ನ ಮೇಲೆ ತಮ್ಮ ಬದುಕನ್ನೂ, ಒಂಟೆಗಳ ಮೇಲೆ ತಮ್ಮ ದ್ರವ್ಯಗಳನ್ನು ತಮಗೆ ಪ್ರಯೋಜನವಿಲ್ಲದ ಜನಕ್ಕೆ ತೆಗೆದುಕೊಂಡು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:6
31 ತಿಳಿವುಗಳ ಹೋಲಿಕೆ  

ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದನಂತರ ನಿಮಗೆ ಮೇಲನ್ನುಂಟುಮಾಡಬೇಕೆಂಬ ಉದ್ದೇಶದಿಂದ ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾರಣ್ಯವನ್ನೂ ನೀರು ಬತ್ತಿಹೋದ ಭೂವಿುಗಳನ್ನೂ ದಾಟಿಸಿ ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟು ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು ಮನಸ್ಸಿನೊಳಗೆ -


ಆಕೆಯು ಸುಗಂಧದ್ರವ್ಯ, ಅಪರಿವಿುತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಯೆರೂಸಲೇವಿುಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.


ನಿಮ್ಮನ್ನಾದರೋ ಯೆಹೋವನು ತನಗೆ ಸ್ವಕೀಯಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತಲ್ಲಾ.


ದಕ್ಷಿಣದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂವಿುಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಹೆಚ್ಚಿನವನಿದ್ದಾನೆ.


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣ ಗಾಳಿಯೇ; ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡಿಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು [ಕಾಣಿಕೆಯಾಗಿ] ಕಳುಹಿಸುತ್ತದೆ.


ನಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿ ಕಾಡಾಗಿಯೂ ಹಳ್ಳಕೊಳ್ಳವಾಗಿಯೂ ನಿರ್ಜಲವಾಗಿಯೂ ಘೋರಾಂಧಕಾರವಾಗಿಯೂ ಯಾರೂ ಹಾದುಹೋಗದೆಯೂ ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡಿಸಿದ ಯೆಹೋವನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ಬಹು ಸುಗಂಧದ್ರವ್ಯಗಳನ್ನು ಕೂಡಿಸಿ ತೈಲವನ್ನೂ ತೆಗೆದುಕೊಂಡು ಪರರಾಜನ ಬಳಿಗೆ ಪ್ರಯಾಣಮಾಡಿದ್ದೀ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದೀ. ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದೀ.


ಇದಲ್ಲದೆ ಐಗುಪ್ತ್ಯರನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರನ್ನಾಳುವನು ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.


ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.


ಮೇಲಕ್ಕೆ ಕಣ್ಣೆತ್ತಿದರೂ ಭೂವಿುಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವವು; ಕಾರ್ಗತ್ತಲೆಗೆ ತಳ್ಳಲ್ಪಡುವರು.


ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ ಅವನಿಗೆ -


ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ ಅವನನ್ನು ಒಗಟುಗಳಿಂದ ಪರೀಕ್ಷಿಸುವದಕ್ಕೆ ಯೆರೂಸಲೇವಿುಗೆ ಬಂದಳು. ಆಕೆಯು ಸುಗಂಧದ್ರವ್ಯ, ಅಪರಿವಿುತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.


ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.


ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಮಾಡುವ ಕೆಲಸದಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಗಳನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿಸಿದ ಎಲ್ಲಾ ಸೇವೆಯೂ ಬಹುಕಠೋರವಾಗಿತ್ತು.


ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್‍ದೇಶದ ದಕ್ಷಿಣಸೀಮೆಗೆ ಮುಂದೆ ಮುಂದೆ ಹೋಗುತ್ತಾ ಇದ್ದನು.


ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ - ನೀನು [ತಾಮ್ರದಿಂದ] ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು; ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು ಎಂದು ಆಜ್ಞಾಪಿಸಿದನು.


ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರ ಮೇಲೆ ಗುರುಗುಟ್ಟುವರು; ದೇಶದಲ್ಲಿಯೋ, ಆಹಾ, ಅಂಧಕಾರವೂ ವ್ಯಾಕುಲವೂ ತುಂಬಿರುವವು, ಮೋಡ ಕವಿದು ಬೆಳಕು ಕತ್ತಲಾಗುವದು.


ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಹಾವಿನ ಬೀಜದಿಂದ ಮಹಾ ನಾಗವುಂಟಾಗುವದು, ಆ ಬೀಜದ ಸಂತತಿಯು ಹಾರುವ ಅಗ್ನಿಮಯಸರ್ಪವೇ.


ಸಿಂಹವು ಅಲ್ಲಿರದು, ಕ್ರೂರ ಜಂತು ಅಲ್ಲಿ ಸೇರದು, ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು;


ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತಾಡುತ್ತಾ ದಕ್ಷಿಣಸೀಮೆಯ ವನದ ಪ್ರಸ್ತಾಪವನ್ನೆತ್ತಿ ಆ ವನಕ್ಕೆ ಹೀಗೆ ಸಾರಿ ಹೇಳು -


ನೀನು ಉಂಡರೂ ನಿನಗೆ ತೃಪ್ತಿಯಾಗದು; ಹಸಿವೆಯು ನಿನ್ನೊಳಗೆ ಇದ್ದೇ ಇರುವದು; ನೀನು [ನಿನ್ನವರನ್ನು] ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ; ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಬಲಹೆಚ್ಚಾಗಿರುವದರಿಂದ ಅದರಲ್ಲಿ ನಂಬಿಕೆಯಿಟ್ಟು ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವಿಯೋ?


ಯೆಹೋವನು ಯೆಹೂದದ ಮೇಲೆ ವ್ಯಾಜ್ಯಹಾಕಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತೀಕಾರಮಾಡುವನು.


ಅನಂತರ ಕಪ್ಪು ಕುದುರೆಗಳು ಉತ್ತರದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳು ದಕ್ಷಿಣದೇಶಕ್ಕೆ ಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು