Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 31:7 - ಕನ್ನಡ ಸತ್ಯವೇದವು J.V. (BSI)

7 ನೀವು ನಿಮ್ಮ ಕೈಯಿಂದ ರೂಪಿಸಿಕೊಂಡಿರುವ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಟುಬಿಡುವನು; ಅವುಗಳನ್ನು ರೂಪಿಸಿದ್ದು ಪಾಪವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಕೆಂದರೆ ನೀವು ನಿಮ್ಮ ಸ್ವಂತ ಕೈಯಿಂದ ರೂಪಿಸಿಕೊಂಡಿರುವ ಪಾಪದ ಗುರುತಾದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ಪಾಪಕಳಂಕಿತವಾದ ನಿಮ್ಮ ಕೈಯಿಂದ ನಿರ್ಮಿಸಿರುವ ಬೆಳ್ಳಿಬಂಗಾರದ ವಿಗ್ರಹಗಳನ್ನು ಎತ್ತಿ ಬಿಸಾಡುವ ದಿನ ಬರಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಜನರು ತಯಾರಿಸಿರುವ ಬೆಳ್ಳಿಬಂಗಾರದ ವಿಗ್ರಹಗಳನ್ನು ಪೂಜಿಸುವದನ್ನು ನಿಲ್ಲಿಸುವರು. ನೀವು ಆ ವಿಗ್ರಹಗಳನ್ನು ತಯಾರಿಸಿದಾಗ ನಿಜವಾಗಿಯೂ ಪಾಪಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ನೀವು ನಿಮ್ಮ ಸ್ವಂತ ಕೈಗಳು ಪಾಪಕ್ಕೋಸ್ಕರ ಮಾಡಿದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 31:7
8 ತಿಳಿವುಗಳ ಹೋಲಿಕೆ  

ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ ಎರಕದ ನಿಮ್ಮ ಬೊಂಬೆಗಳ ಬಂಗಾರದ ಮುಲಾಮನ್ನೂ ನೀವು ಹೊಲಸು ಮಾಡಿ ಆ ವಿಗ್ರಹಗಳನ್ನು - ತೊಲಗಿ ಎಂದು ಹೊಲೆಯಂತೆ ಬಿಸಾಟುಬಿಡುವಿರಿ.


ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿಕಣ್ಣು ಕಪಟಗಳಿಗಾಗಿ ಬಿಸಾಟುಬಿಟ್ಟು


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಎಫ್ರಾಯೀಮು - ವಿಗ್ರಹಗಳ ಗೊಡವೆ ನನಗೆ ಇನ್ನೇಕೆ [ಅಂದುಕೊಳ್ಳುವದು]; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.


ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಯೆಹೋವನಿಗೆ ಹೇಯವಾದದ್ದು.


ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣವಿುಸಿವೆ.


ತಮ್ಮ ಸೃಷ್ಟಿಕರ್ತನನ್ನೇ ಲಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೇ ಕಣ್ಣಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು