Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:10 - ಕನ್ನಡ ಸತ್ಯವೇದವು J.V. (BSI)

10 ನಿರ್ಭೀತರೇ, ಒಂದು ವರುಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ; ದ್ರಾಕ್ಷೆಯ ಕೊಯ್ಲು ಇಲ್ಲದೆ ಹೋಗುವದು, ಯಾವ ಬೆಳೆಯೂ ದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಆಗ ದ್ರಾಕ್ಷಿಯ ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷೆಯ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸ್ತ್ರೀಯರೇ, ನೀವೀಗ ಭದ್ರವಾಗಿದ್ದೀರಿ ಎಂದು ನೀವು ನೆನಸುತ್ತೀರಿ, ಆದರೆ ಒಂದು ವರ್ಷದ ನಂತರ ನಿಮಗೆ ಸಂಕಟವು ಪ್ರಾರಂಭವಾಗುವದು. ಮುಂದಿನ ವರ್ಷ ನೀವು ದ್ರಾಕ್ಷಿಹಣ್ಣುಗಳನ್ನು ಕೂಡಿಸುವದಿಲ್ಲ. ಕೂಡಿಸಲು ದ್ರಾಕ್ಷಿಹಣ್ಣುಗಳೇ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷಿ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:10
14 ತಿಳಿವುಗಳ ಹೋಲಿಕೆ  

ನಾನು ಇವರನ್ನು ನಿರ್ಮೂಲಮಾಡಿ ಕೊಚ್ಚಿಬಿಡುವೆನು; ದ್ರಾಕ್ಷೆಯ ಬಳ್ಳಿಯಲ್ಲಿಯೂ ಅಂಜೂರದ ಮರದಲ್ಲಿಯೂ ಹಣ್ಣಿರುವದಿಲ್ಲ, ಎಲೆಯು ಬಾಡುವದು; ನಾನು ಹಾಳು ಮಾಡುವವರನ್ನು ಅವರಿಗೆ ನೇವಿುಸುವೆನು. ಇದು ಯೆಹೋವನ ನುಡಿ.


ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ ಮುಳ್ಳುಗಿಳ್ಳು ಮುಚ್ಚಿಕೊಂಡು ಹೋಗುವದು.


ಅವರ ಆಸ್ತಿಯು ಸೂರೆಯಾಗುವದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.


ಆಹಾ, ಅಂಜೂರವು ಚಿಗುರದಿದ್ದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರವನ್ನು ಕೊಡದೆಹೋದರೂ ಹಿಂಡು ಹಟ್ಟಿಯೊಳಗಿಂದ ನಾಶವಾದರೂ ಮಂದೆಯು ಕೊಟ್ಟಿಗೆಗಳೊಳಗೆ ಇಲ್ಲದಿದ್ದರೂ


ದ್ರಾಕ್ಷಾಲತೆಯು ಆಶಾಭಂಗಪಟ್ಟಿದೆ; ಅಂಜೂರದ ಗಿಡವು ಕ್ಷೀಣವಾಗಿದೆ; ದಾಳಿಂಬ, ಖರ್ಜೂರ, ಸೇಬು, ಅಂತು ಸಕಲ ವನವೃಕ್ಷಗಳು ಒಣಗಿವೆ, ಆನಂದವು ತಗ್ಗಿ ನರಜನ್ಮದವರಿಗೆ ತಪ್ಪಿಹೋಗಿದೆ.


ಅದು ನನ್ನ ದ್ರಾಕ್ಷೆಯ ಬಳ್ಳಿಗಳನ್ನು ಹಾಳುಮಾಡಿದೆ, ನನ್ನ ಅಂಜೂರದ ಗಿಡಗಳನ್ನು ಸಿಗಿದುಹಾಕಿದೆ, ಅವುಗಳನ್ನು ಬೋಳುಮಾಡಿ ಬಿಟ್ಟುಬಿಟ್ಟಿದೆ; ರೆಂಬೆಗಳು ಬಿಳುಪಾಗಿ ಹೋಗಿವೆ.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;


ಅವಳು ಯಾವ ಅಂಜೂರ ದ್ರಾಕ್ಷೆಗಳನ್ನು ಇವು ನನ್ನ ವಿುಂಡರಿಂದಾದ ಪ್ರತಿಫಲ ಅಂದುಕೊಂಡಳೋ ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.


ಹರ್ಷಾನಂದಗಳು ತೋಟಗಳಿಂದ ತೊಲಗಿವೆ, ದ್ರಾಕ್ಷೆಯ ತೋಟಗಳಲ್ಲಿ ಉತ್ಸಾಹಧ್ವನಿಯೂ ಉಲ್ಲಾಸದ ಆರ್ಭಟವೂ ಇರುವದಿಲ್ಲ, ತುಳಿಯುವವರು ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ, ಅವರ ಕೂಗನ್ನು ನಿಲ್ಲಿಸಿಬಿಟ್ಟಿದ್ದೇನೆ.


ಅಮಲೇರಿದವರೇ, ಎಚ್ಚರಗೊಳ್ಳಿರಿ, ಅಳಿರಿ; ಕುಡಿಕರೇ, ಅರಚಿಕೊಳ್ಳಿರಿ; ದ್ರಾಕ್ಷಾರಸವು ನಿಮ್ಮ ಬಾಯಿಗೆ ಇನ್ನು ಬೀಳದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು