ಯೆಶಾಯ 32:11 - ಕನ್ನಡ ಸತ್ಯವೇದವು J.V. (BSI)11 ನಿಶ್ಚಿಂತೆಯವರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ ಬೆತ್ತಲೆಯಾಗಿ ಸೊಂಟಕ್ಕೆ [ಗೋಣಿತಟ್ಟನ್ನು] ಸುತ್ತಿಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸುಖವಾಗಿರುವವರೇ, ಗಡಗಡನೆ ನಡುಗಿರಿ. ನಿಶ್ಚಿಂತರಾಗಿರುವವರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಗಳನ್ನು ಕಿತ್ತುಹಾಕಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕಬಟ್ಟೆಯನ್ನು ಧರಿಸಿರಿ. ಆ ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿಶ್ಚಿಂತೆಯುಳ್ಳ ಸ್ತ್ರೀಯರೇ, ನೀವು ನಡುಗಿರಿ. ನಿರ್ಭೀತ ಪುತ್ರಿಯರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ, ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಅಧ್ಯಾಯವನ್ನು ನೋಡಿ |