ಯೆಶಾಯ 32:2 - ಕನ್ನಡ ಸತ್ಯವೇದವು J.V. (BSI)2 ಮತ್ತು ಒಬ್ಬ ಪುರುಷನು ಗಾಳಿಯಲ್ಲಿ ಮರೆಯಂತೆಯೂ ಅತಿವೃಷ್ಟಿಯಲ್ಲಿ ಆವರಣದ ಹಾಗೂ ಮರುಭೂವಿುಯಲ್ಲಿ ನೀರಿನ ಕಾಲುವೆಗಳ ಪ್ರಕಾರವೂ ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು. ಅಧ್ಯಾಯವನ್ನು ನೋಡಿ |