Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:6 - ಕನ್ನಡ ಸತ್ಯವೇದವು J.V. (BSI)

6 ನೀಚನು ನೀಚವಾಗಿ ಮಾತಾಡುವನು; ಅವನ ಹೃದಯವು ಕೇಡನ್ನು ಕಲ್ಪಿಸಿ ಅಲ್ಲದ್ದನ್ನು ನಡೆಯಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ ಹಸಿವೆಗೊಂಡವನ ಆಶೆಯನ್ನು ಬರಿದು ಮಾಡಿ ಬಾಯಾರಿದವನ ಪಾನವನ್ನು ತಪ್ಪಿಸುವದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೂರ್ಖನು ಆಡುವುದು ಕೆಡುಕನ್ನೇ, ಅವನು ಮಾಡುವುದು ಅಧರ್ಮವನ್ನೇ, ನುಡಿಯುವುದು ಸರ್ವೇಶ್ವರ ಸ್ವಾಮಿಗೆ ವಿರುದ್ಧವಾದ ಅಸತ್ಯವನ್ನೇ. ಆತ ಹಸಿದವರಿಗೆ ಆಹಾರವನ್ನು ಕೊಡುವುದಿಲ್ಲ. ಬಾಯಾರಿದವರಿಗೆ ನೀರನ್ನು ಕೊಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದುಷ್ಟನು ದುಷ್ಟತೆಯ ಬಗ್ಗೆ ಮಾತನಾಡುವನು. ದುಷ್ಕೃತ್ಯಗಳನ್ನು ಮಾಡಲು ತನ್ನ ಹೃದಯದಲ್ಲಿ ಆಲೋಚಿಸುವನು. ದುಷ್ಟನು ಯೆಹೋವನ ಬಗ್ಗೆ ಕೆಟ್ಟವುಗಳನ್ನು ಹೇಳುತ್ತಾನೆ. ಹಸಿದವರಿಗೆ ಆಹಾರವನ್ನು ತಿನ್ನುವದಕ್ಕಾಗಲಿ ಬಾಯಾರಿದವರಿಗೆ ನೀರನ್ನು ಕುಡಿಯುವದಕ್ಕಾಗಲಿ ಅವನು ಬಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:6
33 ತಿಳಿವುಗಳ ಹೋಲಿಕೆ  

ಹೇಗಂದರೆ ಮನಸ್ಸಿನೊಳಗಿಂದ ಕೆಟ್ಟ ಆಲೋಚನೆ ಕೊಲೆ ಹಾದರ ಸೂಳೆಗಾರಿಕೆ ಕಳ್ಳತನ ಸುಳ್ಳುಸಾಕ್ಷಿ ಬೈಗಳು ಹೊರಟು ಬರುತ್ತವೆ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ನೀವು ನನ್ನ ಜನರನ್ನು ಜಜ್ಜಿ ಬಡವರ ಮುಖವನ್ನು ಹಿಂಡುವದೇಕೆ ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.


ಕೆಟ್ಟವರಿಂದಲೇ ಕೇಡು ಎಂಬದಾಗಿ ಹಿರಿಯರ ಗಾದೆಯುಂಟಷ್ಟೆ; ನಾನು ನಿನಗೆ ವಿರೋಧವಾಗಿ ಕೈಯೆತ್ತುವದಿಲ್ಲ.


ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.


ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ದೇಶದ ದರಿದ್ರರನ್ನು ನಿರ್ಮೂಲ ಮಾಡುವವರೇ, ಕೇಳಿರಿ!


ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.


ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸನು, ಅವರಲ್ಲಿನ ಅನಾಥರನ್ನೂ ವಿಧವೆಯರನ್ನೂ ಕರುಣಿಸನು; ಪ್ರತಿಯೊಬ್ಬನೂ ಭ್ರಷ್ಟನೂ ದುಷ್ಟನೂ ಆಗಿದ್ದಾನೆ; ಎಲ್ಲರ ಬಾಯೂ ನೀಚವಾಗಿ ಮಾತಾಡುತ್ತದೆ. ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು ಯೆಹೋವನ ಮೇಲೆ ಕುದಿಯುವನು.


ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ ನಾನು ದುಷ್ಟರೊಡನೆ ಕೂಡಿ ಕೆಟ್ಟ ಕೆಲಸಗಳನ್ನು ನಡಿಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.


ಜ್ಞಾನವು ಮೂರ್ಖನಿಗೆ ದುರ್ಲಭ; ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.


ಅನ್ಯಾಯವಾದ ತೀರ್ಪುಗಳನ್ನು ತೀರಿಸಿ ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ!


ನಾನು ಅದನ್ನು ಭ್ರಷ್ಟ ಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ [ನನ್ನ] ಪ್ರಜೆಯನ್ನು ಸೂರೆಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅದಕ್ಕೆ ಅಪ್ಪಣೆಕೊಡುವೆನು.


ದುಷ್ಟರನ್ನು ಕರುಣಿಸಿದರೂ ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥವಂತರ ದೇಶದಲ್ಲಿಯೂ ಅನ್ಯಾಯವನ್ನಾಚರಿಸುವರು.


ಇಗೋ, ಆತನೂ ವಿವೇಕಿ, ತನ್ನ ಮಾತುಗಳನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು; ಕೆಡುಕರ ಮನೆತನಕ್ಕೂ ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ಭಂಗವೂ ನಾಶನವೂ ಉಂಟಾಗುತ್ತವೆ;


ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರ ಅನುಸರಣೆಯನ್ನು ಬಿಟ್ಟು ತಿರುಗಿಕೊಂಡಿದ್ದೇವೆ, ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.


ಅನೇಕರು ತಮ್ಮನ್ನು ಶುದ್ಧೀಕರಿಸಿ ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವದು.


[ಟಗರುಹೋತಗಳೇ,] ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ವಿುಕ್ಕ ಮೇವನ್ನು ತುಳಿದು ಕಾಲಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು ವಿುಕ್ಕದ್ದನ್ನು ಕಾಲಿನಿಂದ ಕಲಕಿ ಬದಿಮಾಡಿದ್ದು ಸಣ್ಣ ಕೆಲಸವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು