ಯೆಶಾಯ 32:9 - ಕನ್ನಡ ಸತ್ಯವೇದವು J.V. (BSI)9 ನಿಶ್ಚಿಂತೆಯ ಹೆಂಗಸರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ; ಭಯವಿಲ್ಲದ ಹೆಣ್ಣುಗಳಿರಾ, ನನ್ನ ಮಾತಿಗೆ ಕಿವಿಗೊಡಿರಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿಶ್ಚಿಂತರಾದ ಸ್ತ್ರೀಯರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸುಖಜೀವಿಗಳಾದ ಮಹಿಳೆಯರೇ, ಏಳಿ ನನ್ನ ಮಾತನ್ನು ಕೇಳಿ. ನಿಶ್ಚಿಂತೆಯಿಂದಿರುವ ಯುವತಿಯರೇ, ನನ್ನ ಧ್ವನಿಗೆ ಕಿವಿಗೊಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಹೆಂಗಸರಲ್ಲಿ ಕೆಲವರು ಈಗ ಶಾಂತರಾಗಿದ್ದಾರೆ. ಈಗ ನೀವು ಸುರಕ್ಷಿತರಾಗಿದ್ದೀರಿ ಎಂದು ನಿಮಗೆ ಅನ್ನಿಸುತ್ತದೆ. ಆದರೆ ನೀವು ಸುಮ್ಮನಿದ್ದು ನಾನು ಹೇಳುವ ಮಾತುಗಳನ್ನು ಕೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿಶ್ಚಿಂತೆಯರಾದ ಮಹಿಳೆಯರೇ, ಏಳಿರಿ. ನನ್ನ ಸ್ವರವನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ. ಅಧ್ಯಾಯವನ್ನು ನೋಡಿ |
ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸುಕುಮಾರತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ ತಾನು ಆಗಲೇ ಹೆತ್ತ ಮಗುವನ್ನೂ ಅದರ ಮೇಲಣ ಮಾಸನ್ನೂ ರಹಸ್ಯವಾಗಿ ತಿನ್ನಬೇಕೆಂದು ಪ್ರಾಣಪ್ರಿಯರಾದ ಗಂಡನಿಗೂ ಮಗನಿಗೂ ಮಗಳಿಗೂ ಮೋರೆಯನ್ನು ಕಪ್ಪುಮಾಡಿಕೊಳ್ಳವಳು.