ಯೆಶಾಯ 33:10 - ಕನ್ನಡ ಸತ್ಯವೇದವು J.V. (BSI)10 ಯೆಹೋವನು ಹೀಗನ್ನುತ್ತಾನೆ - ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಕೂಡಲೆ ಉನ್ನತೋನ್ನತನಾಗುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ಹೀಗೆನ್ನುತ್ತಾನೆ, “ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರ ಹೀಗೆನ್ನೆತ್ತಾರೆ : “ಈಗ ಏಳುವೆನು. ಈಗಲೇ ಎದ್ದು ಸಿದ್ಧನಾಗುವೆನು. ಇದೀಗಲೇ ನನ್ನ ಮಹಿಮೆಯನ್ನು ತೋರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ಹೀಗೆನ್ನುತ್ತಾನೆ, “ಈಗ ನಾನು ಎದ್ದುನಿಂತು ನನ್ನ ಮಹತ್ವವನ್ನು ತೋರಿಸುವೆನು. ಈಗ ನಾನು ಜನರಿಗೆ ಉನ್ನತೋನ್ನತನಾಗುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರು ಹೀಗೆನ್ನುತ್ತಾರೆ, “ನಾನು ಈಗ ಏಳುವೆನು. ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು. ಈಗ ಉನ್ನತೋನ್ನತನಾಗುವೆನು. ಅಧ್ಯಾಯವನ್ನು ನೋಡಿ |
ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.