Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:17 - ಕನ್ನಡ ಸತ್ಯವೇದವು J.V. (BSI)

17 ನೀವು ಭೂಷಿತರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ಕಣ್ಣು ತುಂಬಾ ನೋಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀವು ಭೂಷಿತ ರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ನೀವು ಕಣ್ಣು ತುಂಬಾ ನೋಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಲಂಕೃತ ರಾಜನನ್ನು ನಿಮ್ಮ ಕಣ್ಣುಗಳು ಕಾಣುವುವು. ಸವಿಸ್ತಾರವಾದ ನಾಡೊಂದನ್ನು ನಿಮ್ಮ ಕಣ್ಣುಗಳು ನೋಡಿ ನಲಿಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿಮ್ಮ ಕಣ್ಣುಗಳು ಸೌಂದರ್ಯ ಪ್ರಭಾವಗಳಿಂದ ತುಂಬಿದ ರಾಜನನ್ನು (ದೇವರನ್ನು) ನೋಡುವವು. ನೀವು ಮಹಾ ದೊಡ್ಡ ದೇಶವನ್ನು ನೋಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವುವು. ಅತಿವಿಸ್ತಾರವಾದ ದೇಶವನ್ನು ಕಣ್ಣು ತುಂಬಾ ನೋಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:17
20 ತಿಳಿವುಗಳ ಹೋಲಿಕೆ  

ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.


ಪ್ರಿಯರೇ, ಈಗ ದೇವರ ಮಕ್ಕಳಾಗಿದ್ದೇವೆ; ಮುಂದೆ ನಾವು ಏನಾಗುವೆವೋ ಅದು ಇನ್ನು ಪ್ರತ್ಯಕ್ಷವಾಗಲಿಲ್ಲ. ಕ್ರಿಸ್ತನು ಪ್ರತ್ಯಕ್ಷನಾಕುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು;


ನಾವು ಕಾಣುವಂಥದನ್ನು ಲಕ್ಷಿಸದೆ ಕಾಣದಿರುವಂಥದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದು ಸ್ವಲ್ಪಕಾಲ ಮಾತ್ರ ಇರುವದು; ಕಾಣದಿರುವಂಥದು ಸದಾಕಾಲವೂ ಇರುವದು.


ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣಿಸಿಕೊಳ್ಳುವೆನು ಎಂದು ಹೇಳಿದನು.


ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು; ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು; ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.


ಆಗ ಹಿಜ್ಕೀಯನು ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.


ಯೆಹೋವನೇ, ನಿನ್ನ ಜನವನ್ನು ಹೆಚ್ಚಿಸಿದ್ದಿ, ಹೌದು ನಿನ್ನ ಪ್ರಜೆಯನ್ನು ವೃದ್ಧಿಗೊಳಿಸಿದ್ದಿ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದಿ.


ನನ್ನ ನಲ್ಲನು ಬಿಳುಪು ಕೆಂಪು ಬಣ್ಣವುಳ್ಳವನು; ಅವನು ಹತ್ತುಸಾವಿರ ಜನರಲ್ಲಿ ಧ್ವಜಪ್ರಾಯನು.


ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹಳ ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬದು ನಿನ್ನ ಬಾಯ ಮಾತುಗಳಿಂದ ಸ್ಪಷ್ಟವಾಗುತ್ತದೆ.


ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; ನಿರಾತಂಕಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.


ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಲು ದೊಡ್ಡವನೆಂದು ಎಣಿಸುತ್ತಿದ್ದರು.


ಮತ್ತು ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇವಿುನೊಳಗೆ ಆಳುವನಷ್ಟೆ. ಆತನ [ಪರಿವಾರದ] ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವದು.


ಅಲ್ಲಿ ಯೆಹೋವನು ಘನಹೊಂದಿದವನಾಗಿ ಹುಟ್ಟುಗೋಲಿನ ದೋಣಿ ಹೋಗದ, ಘನನಾವೆಯೂ ಸಂಚರಿಸದ ವಿಸ್ತೀರ್ಣನದೀನದಗಳಂತೆ ನಮ್ಮೊಂದಿಗಿರುವನು.


ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.


ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು [ಹಂಬಲಿಕೆಯಿಂದ] ನನ್ನಲ್ಲಿ ಕುಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು