Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:19 - ಕನ್ನಡ ಸತ್ಯವೇದವು J.V. (BSI)

19 ನಿಮಗೆ ತಿಳಿಯಲಾಗದ ಅನ್ಯಭಾಷೆಯನ್ನೂ ನೀವು ಗ್ರಹಿಸಲಾರದ ತೊದಲುಮಾತುಗಳನ್ನೂ ಆಡುವ ಆ ಕ್ರೂರಜನರನ್ನು ಕಾಣದೆ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮಗೆ ತಿಳಿಯದ ಅನ್ಯಭಾಷೆಯನ್ನೂ, ನೀವು ಗ್ರಹಿಸಲಾರದ ತೊದಲು ಮಾತುಗಳನ್ನೂ ಆಡುವ ಆ ಕ್ರೂರ ಜನರನ್ನು ಇನ್ನು ಮುಂದೆ ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿಮಗೆ ತಿಳಿಯಲಾಗದ ಅನ್ಯಭಾಷೆಯನ್ನು, ನೀವು ಗ್ರಹಿಸಲಾಗದ ಅಸ್ಪಷ್ಟ ಮಾತುಗಳನ್ನು ಆಡುವ ಅಹಂಕಾರದ ಜನರನ್ನು ಇನ್ನು ಮೇಲೆ ಕಾಣಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀನು ತಿಳಿಯಲಾಗದ ಹಾಗೆ ಕಠಿಣ ಭಾಷೆಯೂ, ಗ್ರಹಿಸಲಾಗದ ಹಾಗೆ ಅಪರೂಪವಾದ ಮಾತನ್ನು ಆಡಿದ ಜನರನ್ನೂ ಇನ್ನು ಮುಂದೆ ನೀನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:19
10 ತಿಳಿವುಗಳ ಹೋಲಿಕೆ  

ಹೌದು, ತೊದಲು ಮಾತಿನವರು, ಅನ್ಯಭಾಷಿಗಳು, ಇವರ ಮೂಲಕವಾಗಿಯೇ ಯೆಹೋವನು ಈ ಜನರ ಮಧ್ಯದಲ್ಲಿ ಮಾತಾಡುವನು.


ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು; ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.


ಯೆಹೋವನು ಅಶ್ಶೂರದ ಅರಸನ ವಿಷಯವಾಗಿ - ನನ್ನ ಮಾತನ್ನು ಕೇಳು, ಅವನು ಪಟ್ಟಣವನ್ನು ಸಮೀಪಿಸುವದಿಲ್ಲ, ಅದಕ್ಕೆ ಬಾಣವನ್ನೆಸೆಯುವದಿಲ್ಲ, ಗುರಾಣಿಹಿಡಿದಿರುವವರನ್ನು ಕಳುಹಿಸುವದಿಲ್ಲ, ಅದನ್ನು ಕೆಡವಿಬಿಡುವದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವದಿಲ್ಲ.


ಆದರೆ ಮೋಶೆ ಆ ಜನರಿಗೆ - ನೀವು ಅಂಜಬೇಡಿರಿ; ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವದಿಲ್ಲ.


ಅನ್ಯಭಾಷೆಯವರ ಮೂಲಕವಾಗಿಯೂ ಪರದೇಶಸ್ಥರ ನಾಲಿಗೆಯಿಂದಲೂ ನಾನು ಈ ಜನರ ಸಂಗಡ ಮಾತಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಕೊಡುವದಿಲ್ಲವೆಂದು ಕರ್ತನು ಹೇಳುತ್ತಾನೆಂಬದಾಗಿ ಧರ್ಮಶಾಸ್ತ್ರದಲ್ಲಿ ಬರೆದದೆ.


ನಾವು ಇಳಿದು ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ತಾರುಮಾರುಮಾಡೋಣ ಬನ್ನಿ ಅಂದನು.


ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವದೇ ಇಲ್ಲ.


ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು