Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:22 - ಕನ್ನಡ ಸತ್ಯವೇದವು J.V. (BSI)

22 ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ಯೆಹೋವ ದೇವರು ನಮ್ಮ ನ್ಯಾಯಾಧಿಪತಿಯಾಗಿದ್ದಾರೆ. ಯೆಹೋವ ದೇವರು ನಮಗೆ ಆಜ್ಞೆಕೊಡುವವರು. ಯೆಹೋವ ದೇವರೇ, ನಮ್ಮ ರಾಜ. ಯೆಹೋವ ದೇವರೇ ನಮ್ಮನ್ನು ರಕ್ಷಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:22
43 ತಿಳಿವುಗಳ ಹೋಲಿಕೆ  

ನ್ಯಾಯವನ್ನು ವಿಧಿಸಿದ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪು ಮಾಡುವದಕ್ಕೆ ನೀನು ಯಾರು?


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು.


ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನವನೇ; ಅವನು ಇಸ್ರಾಯೇಲ್ಯರ ಸದಮಲಸ್ವಾವಿುಯ ಸ್ವಕೀಯನು.


ಭಯಭ್ರಾಂತಹೃದಯರಿಗೆ - ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ದೈವಿಕ ಪ್ರತಿಫಲವನ್ನು ಕೊಡುವದಕ್ಕೂ ಬರುವನು; ತಾನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಹೇಳಿರಿ.


ಇಗೋ ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸಪಡುವೆನು; ನನ್ನ ಬಲವೂ ಕೀರ್ತನೆಯೂ ಯಾಹುಯೆಹೋವನಷ್ಟೆ, ಆತನೇ ನನಗೆ ರಕ್ಷಕನಾದನು ಎಂಬದೇ.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ - ರಾಜಾಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.


ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ಇದಲ್ಲದೆ ಸಿಂಹಾಸನವು ಕೃಪಾಧಾರದ ಮೇಲೆ ಸ್ಥಾಪಿತವಾಗಿದೆ; ರಾಜ್ಯಭಾರಪ್ರವೀಣನೂ ಧರ್ಮಾಸಕ್ತನೂ ನ್ಯಾಯನಿಪುಣನೂ ಆದವನು ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ಕುಳಿತಿದ್ದಾನೆ.


ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು.


ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಹೊಳೆದು ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -


ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.


ದೇವರೇ, ನೀನು ಮೊದಲಿಂದಲೂ ನನ್ನ ಅರಸನೂ ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡಿಸಿದಾತನೂ ಆಗಿದ್ದೀಯಲ್ಲವೇ?


ದೇವರೇ, ನೀನೇ ನನ್ನ ಅರಸನು; ಯಾಕೋಬವಂಶಕ್ಕೆ ಜಯಪ್ರದನಾಗು.


ಜನಪ್ರಧಾನರಲ್ಲಿ ಪರೋಷ್, ಪಹತ್


ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು.


ಚೀಯೋನ್ ನಗರಿಗೆ - ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು ಹೇಳಿರಿ ಎಂಬದು.


ಅದೇನಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.


ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ!


ಆತನು ದೇಶದೇಶಗಳ ವ್ಯಾಜ್ಯಗಳನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ [ಆಯುಧಗಳನ್ನು] ಕುಲುಮೆಗೆ ಹಾಕಿ ಕತ್ತಿಗಳನ್ನು ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು; ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು, ಇನ್ನು ಯುದ್ಧಾಭ್ಯಾಸವು ನಡೆಯುವದೇ ಇಲ್ಲ.


ನೀವು ಭೂಷಿತರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ಕಣ್ಣು ತುಂಬಾ ನೋಡುವಿರಿ.


ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.


ಯೆಹೋವನು ಹೀಗನ್ನುತ್ತಾನೆ - ಶೂರನ ಸೆರೆಯವರೂ ಅಪಹರಿಸಲ್ಪಡುವರು, ಭೀಕರನ ಕೊಳ್ಳೆಯೂ ತೆಗೆಯಲ್ಪಡುವದು; ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.


ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವದು.


ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.


ನನ್ನ ರಕ್ಷಣಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವದು; ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವದು, ಹುಳವು ಅವರನ್ನು ಉಣ್ಣೆಯಂತೆ ಮೆದ್ದುಬಿಡುವದು;


ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು - ನಮಗೊಬ್ಬ ಅರಸನನ್ನು ನೇವಿುಸೆಂದು ನನ್ನನ್ನು ಬೇಡಿಕೊಂಡಿರಿ.


ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು.


ಮತ್ತು ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇವಿುನೊಳಗೆ ಆಳುವನಷ್ಟೆ. ಆತನ [ಪರಿವಾರದ] ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವದು.


ಯಾಕೋಬ್ಯರ ಅರಸನಾದ ಯೆಹೋವನು ಹೀಗನ್ನುತ್ತಾನೆ - ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ.


ಇಸ್ರಾಯೇಲ್ಯರ ಅರಸನೂ ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಆದಿ, ಅಂತವೂ ನಾನೇ; ನಾನು ಹೊರತು ಯಾವ ದೇವರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು