Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:23 - ಕನ್ನಡ ಸತ್ಯವೇದವು J.V. (BSI)

23 ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ; ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಶತ್ರು ಹಡಗುಗಳ ಹಗ್ಗಗಳು ಸಡಿಲ, ಅದರ ಕೂವೆಯ ಬುಡ ಸಡಿಲ; ಅದರ ಹಾಯಿಯನ್ನು ಮುದುರದಂತೆ ಹಿಡಿದುಕೊಳ್ಳಲು ಅಸಾಧ್ಯ. ಅವುಗಳನ್ನು ಸೂರೆಮಾಡಿ ಕೊಳ್ಳೆಹೊಡೆದು, ಸಮನಾಗಿ ಹಂಚಿಕೊಳ್ಳಲು ಎಲ್ಲರಿಗೂ ಆಸ್ಪದವುಂಟು. ಕುಂಟರು ಕೂಡ ತಮ್ಮ ಪಾಲನ್ನು ಪಡೆಯಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿನ್ನ ಹಗ್ಗಗಳು ಸಡಲಿ, ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು. ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:23
17 ತಿಳಿವುಗಳ ಹೋಲಿಕೆ  

ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು ಕುಡಿದು ಅದರಲ್ಲಿದ್ದ ಬೆಳ್ಳಿಬಂಗಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.


ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಠರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;


ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.


ಮೂರನೆಯ ದಿನದಲ್ಲಿ ಹಡಗಿನ ಅಡ್ಡಮರವನ್ನು ತಮ್ಮ ಕೈಯಿಂದಲೇ ಹೊರಗೆ ಎತ್ತಿ ಹಾಕಿದರು.


ಅಲ್ಲಿ ಯೆಹೋವನು ಘನಹೊಂದಿದವನಾಗಿ ಹುಟ್ಟುಗೋಲಿನ ದೋಣಿ ಹೋಗದ, ಘನನಾವೆಯೂ ಸಂಚರಿಸದ ವಿಸ್ತೀರ್ಣನದೀನದಗಳಂತೆ ನಮ್ಮೊಂದಿಗಿರುವನು.


ನೀವು ಕೊಳ್ಳೆಹೊಡೆದದ್ದನ್ನು ಇತರರು ವಿುಡತೆಗಳಂತೆ ಕೊಳ್ಳೆಮಾಡುವರು; ಶಲಭಗಳಂತೆ ಅದರ ಮೇಲೆ ಹಾರಿಬೀಳುವರು;


ಸೂರೆಯಾಗದಿದ್ದರೂ ಸೂರೆಮಾಡಿದಿ, ಬಾಧೆಪಡದಿದ್ದರೂ ಬಾಧಿಸಿದಿ; ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ! ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವದಕ್ಕೋಸ್ಕರ ಅಲ್ಲಿಗೆ ಹೋಗಲು ಅವರಿಗೆ ದ್ರವ್ಯ ವಸ್ತ್ರ ಶ್ರೇಷ್ಠಾಯುಧ ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲುಕೊಂಡರು. ಕೊಳ್ಳೆಯು ಬಲುಹೆಚ್ಚಾಗಿದ್ದದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು.


ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.


ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದರಿಂದ ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.


ಅರಣ್ಯದಲ್ಲಿ ಒರತೆಗಳು ಒಡೆಯುವವು, ಒಣ ನೆಲದಲ್ಲಿ ನದಿಗಳು ಹುಟ್ಟಿ ಹರಿಯುವವು.


ಶೆಬದವರೂ ದೆದಾನಿನವರೂ ತಾರ್ಷೀಷಿನ ವರ್ತಕರೂ ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ - ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು ದನ ಮುಂತಾದ ಸೊತ್ತನ್ನು ಅಪಹರಿಸಿ ಅಪಾರವಾದ ಆಸ್ತಿಯನ್ನು ಸುಲಿದುಕೊಂಡುಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯಾ ಎಂದು ಕೇಳುವರು.


ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು