ಯೆಶಾಯ 33:6 - ಕನ್ನಡ ಸತ್ಯವೇದವು J.V. (BSI)6 ಜ್ಞಾನವೂ ತಿಳುವಳಿಕೆಯೂ ರಕ್ಷಣ ಕಾರ್ಯಸಮೃದ್ಧಿಯೂ ಇರುವದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಜ್ಞಾನವೂ, ತಿಳಿವಳಿಕೆಯೂ, ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿಮ್ಮ ಕಾಲಕ್ಕೆ ಬೇಕಾದ ಸ್ಥಿರತೆಯನ್ನು ನೀಡುವರು. ರಕ್ಷಣೆಗೆ ಬೇಕಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುವರು. ಸರ್ವೇಶ್ವರ ಸ್ವಾಮಿಯಲ್ಲಿ ನಿಮಗಿರುವ ಭಯಭಕ್ತಿಯೇ ನಿಮ್ಮ ನಿಧಿಯಾಗಿರುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಜೆರುಸಲೇಮೇ, ನೀನು ಐಶ್ವರ್ಯವಂತಳಾಗಿರುವೆ. ನೀನು ದೇವರ ವಿಷಯವಾದ ಜ್ಞಾನ, ತಿಳುವಳಿಕೆ ಮತ್ತು ರಕ್ಷಣೆಗಳಿಂದ ಐಶ್ವರ್ಯವಂತಳಾಗಿರುವೆ. ಯೆಹೋವನ ಮೇಲೆ ನಿನಗಿರುವ ಗೌರವವೇ ನಿನ್ನ ಭಂಡಾರವಾಗಿದೆ. ನೀನು ಹೀಗೆಯೇ ಮುಂದುವರಿಯುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ನಿಮ್ಮ ಸಮಯಕ್ಕೆ ಖಚಿತವಾದ ಆಧಾರವಾಗುತ್ತಾರೆ. ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾಗಿಯೂ ಇರುವನು. ಯೆಹೋವ ದೇವರ ಭಯವೇ ಅವನ ಬೊಕ್ಕಸವಾಗಿರುವುದು. ಅಧ್ಯಾಯವನ್ನು ನೋಡಿ |