ಯೆಶಾಯ 34:1 - ಕನ್ನಡ ಸತ್ಯವೇದವು J.V. (BSI)1 ಜನಾಂಗಗಳೇ, ಸಮೀಪಿಸಿ ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂವಿುಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವದೆಲ್ಲವೂ ಆಲಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ರಾಷ್ಟ್ರಗಳೇ, ಬನ್ನಿ, ಹತ್ತಿರಕ್ಕೆ ಬಂದು ಕೇಳಿರಿ; ಜನಾಂಗಗಳೇ, ಕಿವಿಗೊಡಿರಿ; ಜಗವೂ ಅದರಲ್ಲಿರುವ ಸಮಸ್ತವೂ, ಲೋಕವೂ ಅದರ ನಿವಾಸಿಗಳೆಲ್ಲರೂ ಆಲಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಎಲ್ಲಾ ಜನಾಂಗಗಳೇ, ಹತ್ತಿರ ಬಂದು ಕೇಳಿರಿ; ಜನಗಳೇ ಸ್ಪಷ್ಟವಾಗಿ ಕೇಳಿಸಿಕೊಳ್ಳಿರಿ. ಭೂಮಿಯೂ ಭೂಮಿಯ ಮೇಲಿರುವ ಸಮಸ್ತವೂ ಅವುಗಳಿಗೆ ಕಿವಿಗೊಡಬೇಕು. ಲೋಕವೂ ಅದರಲ್ಲಿರುವ ಸಮಸ್ತವೂ ಆಲಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ರಾಷ್ಟ್ರಗಳೇ, ಕೇಳುವುದಕ್ಕೆ ಹತ್ತಿರ ಬನ್ನಿರಿ, ಕಿವಿಗೊಡಿರಿ. ಭೂಮಿಯೂ, ಅದರಲ್ಲಿರುವ ಸಮಸ್ತವೂ; ಲೋಕವೂ, ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ. ಅಧ್ಯಾಯವನ್ನು ನೋಡಿ |