Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:11 - ಕನ್ನಡ ಸತ್ಯವೇದವು J.V. (BSI)

11 ಅದು ಕೊಕ್ಕರೆ ಮುಳ್ಳುಹಂದಿಗಳ ಹಕ್ಕು ಆಗುವದು; ಕಾಗೆಗೂಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ಹಾಳೆಂಬ ನೂಲನ್ನೂ ಪಾಳೆಂಬ ಮಟ್ಟಗೋಲನ್ನೂ ಎಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಕಾಡಿನ ಪಕ್ಷಿಗಳು, ಪ್ರಾಣಿಗಳು ಅಲ್ಲಿ ವಾಸಿಸುವವು. ಗೂಬೆ ಮತ್ತು ಕಾಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ನಾಶ ಎಂಬ ನೂಲನ್ನೂ ಪಾಳು ಎಂಬ ಮಟ್ಟಗೋಲನ್ನೂ ಎಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದು ಹದ್ದುಗಳ, ಮುಳ್ಳುಹಂದಿಗಳ ಸ್ವಾಧೀನವಾಗುವುದು. ಕಾಗೆಗೂಗೆಗಳಿಗೆ ಅದು ಗೂಡಾಗುವುದು. ಸರ್ವೇಶ್ವರ ಹಾಳುಪಾಳನ್ನೇ ಅದರ ಅಳತೆಗೋಲನ್ನಾಗಿಯೂ ಅಸ್ತವ್ಯಸ್ತತೆಯನ್ನೇ ಅದರ ಮಟ್ಟಗೋಲನ್ನಾಗಿಯೂ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪಕ್ಷಿಗಳು ಮತ್ತು ಚಿಕ್ಕಪ್ರಾಣಿಗಳೂ ಅದರಲ್ಲಿ ವಾಸಿಸುವವು. ಗೂಬೆಗಳೂ ಕಾಗೆಗಳೂ ಅಲ್ಲಿ ವಾಸಿಸುವವು. ಅದು “ಬೆಂಗಾಡಿನ ಮರುಭೂಮಿ” ಎಂದು ಕರೆಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಬಕಪಕ್ಷಿಯು ಮತ್ತು ಮುಳ್ಳುಹಂದಿಯು ಅದನ್ನು ಆವರಿಸಿಕೊಳ್ಳುವುವು. ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವುವು. ಗಲಿಬಿಲಿ ಎಂಬ ನೂಲನ್ನು, ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:11
14 ತಿಳಿವುಗಳ ಹೋಲಿಕೆ  

ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳುಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ.


ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ ಅಹಾಬನ ಮನೆಯನ್ನೂ ನೆಲಸಮಮಾಡಿಬಿಟ್ಟೆನಲ್ಲಾ; ಯೆರೂಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಡಬ್ಬುಹಾಕುವ ಮೇರೆಗೆ ನಾನು ಯೆರೂಸಲೇಮನ್ನು ಒರಸಿ ಡಬ್ಬು ಹಾಕುವೆನು.


ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ ಮುಳ್ಳುಹಂದಿಯೂ ಅದರ ಬೋದಿಗೆಗಳಲ್ಲಿ ವಾಸಮಾಡಿಕೊಳ್ಳುವವು; ಕಿಟಕಿಗಳಲ್ಲಿ ಚಿಲಿಪಿಲಿಗಾನವು ಕೇಳಿಸುವದು; ಹೊಸ್ತಿಲುಗಳಲ್ಲಿ ಹಾಳುಬಡಿಯುವದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವದು.


ಅವನು ಗಟ್ಟಿಯಾದ ಶಬ್ದದಿಂದ ಕೂಗುತ್ತಾ - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾನಗರಿಯು ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಆಶ್ರಯವೂ ಆದಳು.


ಮತ್ತು ಆ ಪ್ರದೇಶವನ್ನು ಜವುಗುನೆಲವನ್ನಾಗಿಯೂ ಮುಳ್ಳುಹಂದಿಗೆ ಸೊತ್ತನ್ನಾಗಿಯೂ ಮಾಡಿ ನಾಶನವೆಂಬ ಬರಲಿನಿಂದ ಗುಡಿಸಿಬಿಡುವೆನು ಎಂದು ಸೇನಾಧೀಶ್ವರನಾದ ಯೆಹೋವನು ಹೇಳಿದ್ದಾನೆ.


ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ ಅವರನ್ನು ನೆಲಕ್ಕೆ ಹಾಕಿಸಿ ಹಗ್ಗದಿಂದ ಅಳತೆ ಮಾಡಿಸಿ ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲು ಉಳಿಸಿದನು. ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೊಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ.


ಅಡವಿಯ ಬಕದಂತಿದ್ದೇನೆ; ಹಾಳೂರಿನ ಗೂಗೆಯಂತಿದ್ದೇನೆ.


ಆತನೇ ಇವುಗಳಿಗೆ ಪಾಲುಮಾಡಿಕೊಟ್ಟಿದ್ದಾನೆ, ಆತನ ಕೈಯೇ ನೂಲುಹಾಕಿ ದೇಶವನ್ನು ಹಂಚಿದೆ; ಅದು ಇವುಗಳಿಗೆ ನಿತ್ಯಸ್ವಾಸ್ತ್ಯವಾಗುವದು, ಅವು ತಲತಲಾಂತರಕ್ಕೂ ಅಲ್ಲಿ ವಾಸಿಸುವವು.


ಯೆಹೋವನು ನನ್ನನ್ನು - ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವದೇನು ಎಂದು ಕೇಳಲು ನಾನು - ಒಂದು ನೂಲುಗುಂಡು ಎಂದು ಉತ್ತರಕೊಟ್ಟೆನು. ಆಗ ಕರ್ತನು - ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಹಿಡಿಯುವೆನು; ಇನ್ನು ಅವರನ್ನು ಕಂಡುಕಾಣದ ಹಾಗಿರೆನು.


ಉಷ್ಟ್ರಪಕ್ಷಿ, ಉಲೂಕ, ಕಡಲ್ಹಕ್ಕಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು