Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 35:1 - ಕನ್ನಡ ಸತ್ಯವೇದವು J.V. (BSI)

1 ಅರಣ್ಯವೂ ಮರುಭೂವಿುಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆನಂದಿಸಲಿ ಅರಣ್ಯವೂ ಮರುಭೂಮಿಯೂ ಹೂಗಳಂತೆ ಅರಳಿ ಹರ್ಷಿಸಲಿ ಒಣನೆಲವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮರಭೂಮಿಯೂ ಒಣನೆಲವೂ ಬಹಳವಾಗಿ ಸಂತೋಷಿಸುವದು. ಅದು ಹರ್ಷಿಸುತ್ತಾ ಪುಷ್ಪದಂತೆ ಫಲಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಣ್ಯವೂ, ಮರುಭೂಮಿಯೂ ಆನಂದಿಸುವುದು: ಒಣ ನೆಲವು ಹರ್ಷಿಸಿ, ತಾವರೆಯಂತೆ ಕಳಕಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 35:1
25 ತಿಳಿವುಗಳ ಹೋಲಿಕೆ  

ಆಗ ಜನರು - ಕಾಡಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಳಕಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ ಎಂದು ಹೇಳುವರು.


ಯೆಹೋವನು ಚೀಯೋನನ್ನು ಸಂತೈಸೇ ಸಂತೈಸುವನು; ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ ಬೀಳುಭೂವಿುಯನ್ನು ಯೆಹೋವನ ವನದ ಹಾಗೂ ಕಳಕಳಿಸುವಂತೆ ಮಾಡುವನು; ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ, ಇವುಗಳು ಅಲ್ಲಿ ನೆಲೆಯಾಗಿರುವವು.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವದು, ಇಸ್ರಾಯೇಲು ಹೂಬಿಟ್ಟು ಚಿಗುರುವದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವದು.


ಆ ದಿನದಲ್ಲಿ ಯೆಹೋವನು ದಯಪಾಲಿಸುವ ಬೆಳೆಯಿಂದ ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಸೌಂದರ್ಯವೂ ಮಹಿಮೆಯೂ ಉಂಟಾಗುವವು, ದೇಶದ ಫಲದಿಂದ ಉನ್ನತಿಯೂ ಭೂಷಣವೂ ಲಭಿಸುವವು.


ಇಗೋ ಒಂದು ವಾಣಿ! - ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜ ಮಾರ್ಗವನ್ನು ನೆಟ್ಟಗೆ ಮಾಡಿರಿ;


ಅತ್ಯಲ್ಪಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.


ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತದ ಊರುಗಳು ಸಂತೋಷಿಸಿದವು.


ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ ಯೆಹೂದಸೀಮೆಯ ನಿವಾಸಿಗಳು ಆನಂದಪಡಲಿ.


ಕೋಟೆಕೊತ್ತಲದ ಪಟ್ಟಣವು ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯನಿವಾಸಸ್ಥಾನವಾಗಿದೆ; ಅಲ್ಲಿ ಕರು ಮೇದು ಮಲಗುವದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವದು.


ಹೊಲಗಳೂ ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ.


ನಾನು ಬೈಲಿನ ನೆಲಸಂಪಿಗೆ, ತಗ್ಗಿನ ತಾವರೆ.


ಅದಕ್ಕೆ ನಾನು - ಕರ್ತನೇ, ಇದು ಎಂದಿನ ತನಕ? ಎಂದು ಕೇಳಲು ಆತನು - ಯೆಹೋವನು ಜನರನ್ನು ದೂರ ತೊಲಗಿಸಿ


ಆ ಕಾಲದಲ್ಲಿ ಯಾವನೇ ಆಗಲಿ ಹಸುವಿನ ಕಡಸನ್ನೂ ಎರಡು ಕುರಿಗಳನ್ನೂ ಸಾಕಿ


ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು.


ಅರಣ್ಯದಲ್ಲಿ ಒರತೆಗಳು ಒಡೆಯುವವು, ಒಣ ನೆಲದಲ್ಲಿ ನದಿಗಳು ಹುಟ್ಟಿ ಹರಿಯುವವು.


ಅರಣ್ಯವೂ ಅಲ್ಲಿನ ಊರುಗಳೂ ಕೇದಾರಿನವರ ಗ್ರಾಮಗಳೂ ಆರ್ಭಟಿಸಲಿ, ಸೆಲಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಕೇಕೆ ಹಾಕಲಿ.


ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ, ನಿಮಗೆ ಕಾಣುವದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು