Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 35:2 - ಕನ್ನಡ ಸತ್ಯವೇದವು J.V. (BSI)

2 ಅದು ಸಮೃದ್ಧಿಯಾಗಿ ಹೂಬಿಟ್ಟು ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವದು; ಲೆಬನೋನಿನ ಮಹಿಮೆಯೂ ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ ನಮ್ಮ ದೇವರ ವೈಭವವನ್ನೂ ಕಾಣುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮರುಭೂಮಿಯು ಹರ್ಷದಿಂದ ಅರಳಿದ ಹೂಗಳಿಂದ ತುಂಬಿಹೋಗುವುದು. ಸಂತೋಷದಿಂದ, ಕುಣಿದಾಡುವದೋ ಎಂಬಂತೆ ತೋರುವದು. ಲೆಬನೋನಿನ ಅರಣ್ಯದಂತೆಯೂ ಕರ್ಮೆಲ್ ಬೆಟ್ಟದಂತೆಯೂ ಶಾರೋನಿನ ಕಣಿವೆಯಂತೆಯೂ ಮನೋಹರವಾಗಿರುವದು. ಇವೆಲ್ಲಾ ನೆರವೇರುವದು ಯಾಕೆಂದರೆ ಎಲ್ಲಾ ಜನರು ಯೆಹೋವನ ಮಹಿಮೆಯನ್ನು ನಮ್ಮ ದೇವರ ಪ್ರಭಾವವನ್ನೂ ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದು ಸಮೃದ್ಧಿಯಾಗಿ ಅರಳಿ, ಆನಂದ ಧ್ವನಿ ಎತ್ತಿ ಉಲ್ಲಾಸಿಸುವುದು. ಲೆಬನೋನಿನ ಘನತೆಯು ಮತ್ತು ಕರ್ಮೆಲ್, ಶಾರೋನಿನ ಗೌರವವು ಅದಕ್ಕೆ ಕೊಡಲಾಗುವುದು. ಅವರು ಯೆಹೋವ ದೇವರ ಮಹಿಮೆಯನ್ನು ಮತ್ತು ನಮ್ಮ ದೇವರ ಘನತೆಯನ್ನು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 35:2
57 ತಿಳಿವುಗಳ ಹೋಲಿಕೆ  

ನನ್ನ ಪವಿತ್ರಾಲಯವನ್ನು ಭೂಷಿಸುವದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.


ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು.


ಇದಕ್ಕೆ ಸರಿಯಾಗಿ ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಅಂದವಾಗಿವೆ ಎಂದು ಬರೆದದೆ. ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ.


ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂವಿುಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವದು.


ಯೆಹೋವನ ಮಹಿಮೆಯು ಗೋಚರವಾಗುವದು, ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.


ಪಟ್ಟಣಕ್ಕೆ ಬೆಳಕನ್ನು ಕೊಡುವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಯಜ್ಞದ ಕುರಿಯಾದಾತನೇ ಅದರ ದೀಪವು.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗೊಳ್ಳನು; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.


ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ. ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ [ತಳಿರುಗಳನ್ನು] ಉದುರಿಸಿಬಿಟ್ಟಿವೆ.


ನಿನ್ನ ಶಿರಸ್ಸು ಕರ್ಮೆಲ್ ಬೆಟ್ಟದಂತೆ ಗಂಭೀರ; ನಿನ್ನ ತಲೆಯ ಕೂದಲು ಧೂಮ್ರವರ್ಣವು; ರಾಜನು ಅದರ ತೆಕ್ಕೆತೆಕ್ಕೆಗಳಲ್ಲಿ ಕಟ್ಟುಬಿದ್ದಿದ್ದಾನೆ.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲವೂ ಪ್ರಣಾಮವಿರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್, ಆಮೆನ್.


ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.


ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ ದೇವರು ಪ್ರಕಾಶಿಸುತ್ತಾನೆ.


ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ಇನ್ನೊಂದು ಸ್ಥಳದಲ್ಲಿ - ಜನಾಂಗಗಳಿರಾ, ದೇವರ ಜನರೊಡನೆ ಉಲ್ಲಾಸಪಡಿರಿ ಎಂದೂ


ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯದಲ್ಲಿ ಮಾತಾಡುತ್ತಿರುವಾಗ ಆ ಮಾತನ್ನು ನುಡಿದನು.


ಎಫ್ರಾಯೀಮ್ಯರು ಶೂರನಂತಿರುವರು, ದ್ರಾಕ್ಷಾರಸಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವದು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ.


ದೇವದಾರು ಕಸ್ತೂರಿಜಾಲಿ ಸುಗಂಧ ಒಲೀವ ಮರಗಳನ್ನು ಅಡವಿಯಲ್ಲಿ ನೆಡುವೆನು, ತುರಾಯಿ ತಪಸಿ ತಿಲಕ ವೃಕ್ಷಗಳನ್ನು ಅರಣ್ಯದಲ್ಲಿ ತೋಪಾಗಿ ಬೆಳೆಯಿಸುವೆನು;


ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವದು; ಆಗ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.


ಆಗ ಒಬ್ಬನು ಮತ್ತೊಬ್ಬನಿಗೆ - ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ ಎಂದು ಕೂಗಿ ಹೇಳಿದನು.


ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.


ದಕ್ಷಿಣೋತ್ತರದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್ ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿಮಾಡುತ್ತವೆ.


ಹೊಲಗಳೂ ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿಮಾಡಲಿ.


ಮತ್ತು ಲುದ್ದದಲ್ಲಿಯೂ ಸಾರೋನಪ್ರಾಂತ್ಯದಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿದರು, ಮತ್ತು ಅವರು ಕರ್ತನ ಕಡೆಗೆ ತಿರುಗಿಕೊಂಡರು.


ಹೊತ್ತಾರೆಯಲ್ಲಿಯೂ ಆತನ ಮಹಿಮೆಯು ನಿಮಗೆ ಕಾಣಬರುವದು. ನೀವು ಯೆಹೋವನ ಮೇಲೆ ಗುಣುಗುಟ್ಟುವ ಮಾತುಗಳು ಆತನಿಗೆ ಕೇಳಿಸಿದವು; ನಮ್ಮ ಮೇಲೆ ನೀವು ಗುಣುಗುಟ್ಟುವದೇನು? ನಾವು ಎಷ್ಟು ಮಾತ್ರದವರು ಎಂದು ಹೇಳಿದರು.


ಗಾದ್ಯರು ಗಿಲ್ಯಾದಿನಲ್ಲಿಯೂ ಬಾಷಾನಿನಲ್ಲಿಯೂ ಅದರ ಗ್ರಾಮಗಳಲ್ಲಿಯೂ ಶಾರೋನಿನ ಎಲ್ಲಾ ಹುಲ್ಲುಗಾವಲುಗಳಲ್ಲಿಯೂ ಅವುಗಳ ಮೇರೆಗಳಲ್ಲಿಯೂ ವಾಸಿಸುತ್ತಿದ್ದರು.


ನಾನು ಬೈಲಿನ ನೆಲಸಂಪಿಗೆ, ತಗ್ಗಿನ ತಾವರೆ.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವದು, ಇಸ್ರಾಯೇಲು ಹೂಬಿಟ್ಟು ಚಿಗುರುವದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವದು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ಉನ್ನತಪರ್ವತವನ್ನು ಹತ್ತಿಕೋ; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ - ಇಗೋ, ನಿಮ್ಮ ದೇವರು!


ಯೆರೂಸಲೇಮ್ ಪುರಿಯನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವದು, ನಿಮ್ಮ ಎಲುಬುಗಳು ಹಸಿಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಒಡೆಯುವದು; ಲೆಬನೋನಿನ [ದೇವದಾರುಗಳ] ಹಾಗೆ ಬೇರುಬಿಟ್ಟುಕೊಳ್ಳುವದು.


ಅಲಮ್ಮೆಲೆಕ್, ಅಮಾದ್, ವಿುಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಗುಲಿ


ಶಾರೋನಿನಲ್ಲಿ ಮೇಯುವ ದನಗಳ ಮೇಲೆ ಶಾರೋನ್ಯನಾದ ಶಿಟ್ರೈ, ತಗ್ಗುಗಳಲ್ಲಿ ಮೇಯುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು