Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 35:4 - ಕನ್ನಡ ಸತ್ಯವೇದವು J.V. (BSI)

4 ಭಯಭ್ರಾಂತಹೃದಯರಿಗೆ - ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ದೈವಿಕ ಪ್ರತಿಫಲವನ್ನು ಕೊಡುವದಕ್ಕೂ ಬರುವನು; ತಾನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಭಯಭ್ರಾಂತ ಹೃದಯವುಳ್ಳವರಿಗೆ ಬಲಗೊಳ್ಳಿರಿ, ಹೆದರಬೇಡಿರಿ. ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವುದಕ್ಕೂ, ದೇವರು ಪ್ರತಿಫಲವನ್ನು ಕೊಡುವುದಕ್ಕೂ ತಾವೇ ಬಂದು ನಿಮ್ಮನ್ನು ರಕ್ಷಿಸುವರು, ಎಂದು ಅವರಿಗೆ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 35:4
52 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ - ಜೆರುಬ್ಬಾಬೆಲನೇ, ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ; ಇದು ಯೆಹೋವನ ನುಡಿ; ನಾನು ನಿಮ್ಮೊಂದಿಗೆ ಇದ್ದೇನೆಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ಏಕಂದರೆ ಯೆಹೋವನು ಮುಯ್ಯಿತೀರಿಸುವ ದಿನವು ಬಂದಿದೆ; ಚೀಯೋನಿನ ವ್ಯಾಜ್ಯದಲ್ಲಿ [ಎದೋವಿುಗೆ] ದಂಡನೆವಿಧಿಸತಕ್ಕ ವರುಷವು ಒದಗಿದೆ.


ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ.


ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.


ಯೆಹೋವನು ನೇವಿುಸಿರುವ ಶುಭವರುಷ, ನಮ್ಮ ದೇವರು ಮುಯ್ಯಿ ತೀರಿಸುವ ದಿನ, ಇವುಗಳನ್ನು ಪ್ರಚುರಗೊಳಿಸುವದಕ್ಕೂ


ಆಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ - ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಯೆಹೋವದೇವರು ನಿನ್ನ ಸಂಗಡ ಇರುತ್ತಾನೆ; ಆತನು ತನ್ನ ಆಲಯದ ಎಲ್ಲಾ ಕೆಲಸವು ತೀರುವವರೆಗೂ ನಿನ್ನನ್ನು ಕೈ ಬಿಡುವದಿಲ್ಲ, ತೊರೆಯುವದಿಲ್ಲ.


ಆದರೆ ಇವು ಸಂಭವಿಸುವದಕ್ಕೆ ತೊಡಗುವಾಗ ಮೇಲಕ್ಕೆ ನೋಡಿರಿ, ನಿಮ್ಮ ತಲೆ ಎತ್ತಿರಿ; ನಿಮ್ಮ ಬಿಡುಗಡೆಯು ಸಮೀಪವಾಗಿದೆ ಅಂದನು.


ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು.


ಆಮೇಲೆ ಆ ಪುರುಷನು ನನಗೆ - ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು ಎಂದು ಹೇಳಿದನು. ಅವನು ಆ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು - ಎನ್ನೊಡೆಯನೇ, ಮಾತಾಡು; ನನ್ನನ್ನು ಬಲಗೊಳಿಸಿದ್ದೀ ಎಂದರಿಕೆಮಾಡಲು


ನಿನ್ನನ್ನು ನಿರ್ಮಾಣಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ - ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!


ಈ ವಿಷಯಗಳಲ್ಲಿ ಸಾಕ್ಷಿಹೇಳುವವನು - ನಿಜವಾಗಿ ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಆತುರಗಾರರ ಮನವು ಅರುಹನ್ನರಿಯುವದು, ತೊದಲುಮಾತಿನವರ ನಾಲಿಗೆಯು ಸ್ವಚ್ಫವಾಗಿಯೂ ಶೀಘ್ರವಾಗಿಯೂ ನುಡಿಯುವದು.


ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.


ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿಜ್ವಾಲೆಯಿಂದ ಖಂಡಿಸುವನು.


ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ಭರವಸವುಳ್ಳವನಾಗಿಯೇ ಇದ್ದೆನು.


ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.


ಇಂತಿರಲು ಕರ್ತನೂ ಸೇನಾಧೀಶ್ವರನೂ ಇಸ್ರಾಯೇಲ್ಯರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ - ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು;


ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಪ್ರಕಾಶಿಸು.


ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ; ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.


ಅವನಿಗೆ ಈ ಪ್ರಕಾರ ಹೇಳಬೇಕು - ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ! ರೆಚೀನ ಅರಾಮ್ಯರು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಗೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.


ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.


ಯೆರೂಸಲೇವಿುನ ಸಂಗಡ ಹೃದಯಂಗಮವಾಗಿ ಮಾತಾಡಿರಿ; ಅದಕ್ಕೆ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ನಿನ್ನ ಮಾನವು ಬೈಲಿಗೆ ಬಿದ್ದು ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿ ತೀರಿಸುವೆನು.


ಅದಕ್ಕೆ ನಾನು - ನನ್ನ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ವ್ರಯಮಾಡಿದ್ದು ಹಾಳೇ, ಬರಿ ಗಾಳಿಯೇ; ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ, ನನಗೆ ಲಾಭವು ನನ್ನ ದೇವರಿಂದಲೇ ಆಗುವದು ಅಂದುಕೊಂಡೆನು.


ಯೆಹೋವನು ಹೀಗನ್ನುತ್ತಾನೆ - ಶೂರನ ಸೆರೆಯವರೂ ಅಪಹರಿಸಲ್ಪಡುವರು, ಭೀಕರನ ಕೊಳ್ಳೆಯೂ ತೆಗೆಯಲ್ಪಡುವದು; ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.


ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯವರಿಗೂ ಪ್ರತಿಕ್ರಿಯೆಮಾಡುವನು.


ಏಕಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರುಷವು ಒದಗಿತ್ತು.


ಮನುಷ್ಯಸದೃಶ್ಯನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು.


ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವದಿಲ್ಲ; ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ ಎಂದು ಹೇಳಿ ದೇವರಲ್ಲಿ ಅವನನ್ನು ಬಲಪಡಿಸಿದನು.


ಹೆಣ್ಣುಹಕ್ಕಿಗಳು ಹಾರಿಯಾಡುತ್ತಾ [ಮರಿಗಳನ್ನು] ಕಾಪಾಡುವಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು, ಹಾದು ಹೋಗುತ್ತಾ ಅಪಾಯದಿಂದ ತಪ್ಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು