ಯೆಶಾಯ 35:7 - ಕನ್ನಡ ಸತ್ಯವೇದವು J.V. (BSI)7 ಬೆಂಗಾಡು ಸರೋವರವಾಗುವದು; ಒಣನೆಲದಲ್ಲಿ ಬುಗ್ಗೆಗಳುಕ್ಕುವವು; ನರಿಗಳು ಮಲಗುತ್ತಿದ್ದ ಹಕ್ಕೆಯು ಆಪುಜಂಬುಗಳ ಪ್ರದೇಶವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರೋವರವಾಗುವುದಾ ಉರಿಗಾಡು ಬುಗ್ಗೆಯಾಗುವುದಾ ಬುವಿ ಬರಡು. ನರಿಗಳು ನಿವಾಸಿಸುವ ಗುಹೆಗಳು ಆಗುವುವು ಹುಲುಸಾದ ಹುಲ್ಲುಗಾವಲುಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಗ ಜನರು ಬಿಸುಲ್ಗುದುರೆಯನ್ನು ನೋಡಿ ನೀರು ಎಂದು ಭಾವಿಸುವರು. ಆದರೆ ಆಗ ನೀರಿನ ಕೊಳಗಳೇ ಇರುವವು. ಬೆಂಗಾಡಿನಲ್ಲಿ ಬಾವಿಗಳಿರುವವು. ನೆಲದೊಳಗಿಂದ ನೀರು ಉಕ್ಕುವುದು. ಒಂದು ಕಾಲದಲ್ಲಿ ಕಾಡುಪ್ರಾಣಿಗಳು ವಾಸವಾಗಿದ್ದ ಸ್ಥಳದಲ್ಲಿ ಎತ್ತರವಾದ ನೀರವಂಜಿಗಳು ಬೆಳೆಯುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಒಣ ನೆಲವು ಸರೋವರವಾಗುವುದು, ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗುವುದು. ನರಿಗಳು ವಾಸಿಸುವ ಪ್ರತಿಯೊಂದು ಮಲಗುವ ಸ್ಥಳದಲ್ಲಿ ಹುಲ್ಲು, ಜೊಂಡು, ಆಪು ಹುಲ್ಲುಗಳಿಂದ ತುಂಬಿರುವುದು. ಅಧ್ಯಾಯವನ್ನು ನೋಡಿ |