ಯೆಶಾಯ 36:15 - ಕನ್ನಡ ಸತ್ಯವೇದವು J.V. (BSI)15 ಹಿಜ್ಕೀಯನು ನಿಮಗೆ - ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೂ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂಬದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹಿಜ್ಕೀಯನು ನಿಮಗೆ, ‘ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೋ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’” ಎಂಬುದಾಗಿ ಹೇಳಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲಿ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಯೆಹೋವನನ್ನು ನಂಬಿರಿ. ಆತನು ನಮ್ಮನ್ನು ರಕ್ಷಿಸುವನು. ಅಶ್ಶೂರದ ಅರಸನು ನಮ್ಮ ಪಟ್ಟಣವನ್ನು ಸೋಲಿಸಲು ಬಿಡುವದಿಲ್ಲ” ಎಂದು ಹಿಜ್ಕೀಯನು ಹೇಳಿದರೆ ಅವನನ್ನು ನಂಬಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರೆಂದೂ, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲವೆಂದೂ ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವರು.’ ಅಧ್ಯಾಯವನ್ನು ನೋಡಿ |