Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:18 - ಕನ್ನಡ ಸತ್ಯವೇದವು J.V. (BSI)

18 ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ. ಯಾವ ರಾಷ್ಟ್ರದ ದೇವರುಗಳು ತಾನೇ ಅಸ್ಸೀರಿಯದ ಅರಸನ ಕೈಯಿಂದ ನಾಡನ್ನು ಬಿಡಿಸಿಕೊಂಡಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “‘ಹಿಜ್ಕೀಯನು ತನ್ನ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ. ಅವನು, “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಹೇಳುತ್ತಾನೆ. ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ. ಬೇರೆ ದೇಶದ ದೇವರುಗಳು ಅವರ ದೇಶವನ್ನು ಅಶ್ಶೂರದ ಅರಸನಿಂದ ಕಾಪಾಡಲು ಶಕ್ತರಾದರೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆಯಾಗಿರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಸ್ಸೀರಿಯದ ಅರಸನ ಕೈಯಿಂದ ಬಿಡಿಸಿದ್ದು ಉಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:18
25 ತಿಳಿವುಗಳ ಹೋಲಿಕೆ  

ಹಿಜ್ಕೀಯನು ನಿಮಗೆ - ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೂ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂಬದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ.


ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.


[ಹಿಜ್ಕೀಯನೇ,] ನೀನು ನಂಬುವ ದೇವರು - ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.


ಈ ದೇಶವನ್ನು ಹಾಳುಮಾಡುವದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಎನ್ನುವ ಅರಸನ ಮಾತುಗಳನ್ನು ತಿಳಿಸಿರಿ ಎಂದು ಹೇಳಿದನು.


ಒಂದು ವೇಳೆ ನೀನು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾ ಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳು ಮಾಡಿದನಲ್ಲಾ!


ಅವರು - ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾವನು ಎಂದು ಹೇಳಿಕೊಳ್ಳುತ್ತಾರಲ್ಲಾ.


ಸ್ವಲ್ಪ ಕಾಲವಾದನಂತರ ನಾನು ಬಂದು ನಿಮ್ಮನ್ನು ಧಾನ್ಯ ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು;


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.


ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಉಳಿಯುವಿಯೋ?


ಅದರ ಅಭಿಪ್ರಾಯವೋ ಹಾಗಲ್ಲ; ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡುವೆನೆಂಬದೇ ಹೊರತು ಈ ಯೋಚನೆಯು ಅದರ ಮನಸ್ಸಿನಲ್ಲಿ ಇಲ್ಲವೇ ಇಲ್ಲ.


ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟಹಾಗೂ ಯೆರೂಸಲೇಮನ್ನೂ ಅದರ ಬೊಂಬೆಗಳನ್ನೂ ಕೆಡವಲಾರೆನೋ? ಎಂಬದೇ.


ಹೀಗಿರಲು ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಅತ್ಯುನ್ನತವಾಗಿತ್ತು; ಅದರ ಕೊಂಬೆಗಳು ನಿಬಿಡವಾಗಿದ್ದವು; ಅಲ್ಲಿ ನೀರಾವರಿಯಿದ್ದ ಕಾರಣ ಅದರ ರೆಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು