ಯೆಶಾಯ 36:2 - ಕನ್ನಡ ಸತ್ಯವೇದವು J.V. (BSI)2 ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬವನನ್ನು ಯೆರೂಸಲೇವಿುನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬುವವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಅಗಸರ ಹೊಲದ ಕಡೆಯಿಂದ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಬಳಿಕ ಅವನು ಲಾಕೀಷಿನಿಂದ ರಬ್ಷಾಕೆ ಎಂಬ ಒಬ್ಬ ದಳಪತಿಯನ್ನು ಮಹಾಸೈನ್ಯದೊಂದಿಗೆ ಜೆರುಸಲೇಮಿನಲ್ಲಿದ್ದ ರಾಜ ಹಿಜ್ಕೀಯನ ಬಳಿಗೆ ಕಳುಹಿಸಿದನು. ಈ ದಳಪತಿ ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ ಕೆರೆಯ ಕಾಲುವೆಯ ಬಳಿ ಪಾಳೆಯ ಮಾಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅಶ್ಶೂರದ ರಾಜನಾದ ಸನ್ಹೇರೀಬನು ತನ್ನ ಸೇನಾದಂಡನಾಯಕನನ್ನು ಒಂದು ದೊಡ್ಡ ಸೈನ್ಯದೊಡನೆ ಜೆರುಸಲೇಮಿನಲ್ಲಿದ್ದ ಅರಸನಾದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಸೇನಾದಂಡನಾಯಕ ತನ್ನ ಸೈನ್ಯದೊಡನೆ ಲಾಕೀಷಿನಿಂದ ಜೆರುಸಲೇಮಿಗೆ ಹೊರಟನು. ಅವರು ಮೇಲಿನ ಕೊಳದ ಬಳಿಯಲ್ಲಿರುವ ನೀರುಕಾಲುವೆಯ ಬಳಿ ನಿಂತರು. ಮೇಲಿನ ಕೊಳವು ಅಗಸರ ಬಯಲಿಗೆ ಹೋಗುವ ಮಾರ್ಗದಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಅಸ್ಸೀರಿಯದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡನು. ಅಧ್ಯಾಯವನ್ನು ನೋಡಿ |