Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:4 - ಕನ್ನಡ ಸತ್ಯವೇದವು J.V. (BSI)

4 ರಬ್ಷಾಕೆಯು ಅವರಿಗೆ - ನೀವು ಹೋಗಿ ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ - ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ರಬ್ಷಾಕೆಯು ಅವರಿಗೆ, “ನೀವು ಹೋಗಿ, ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ, ‘ಈ ನಿನ್ನ ಭರವಸೆಗೆ ಯಾವ ಆಧಾರವುಂಟು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಳಪತಿ ಅವರಿಗೆ, “ನೀವು ಹೋಗಿ ಅಸ್ಸೀರಿಯದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ : “ನಿನ್ನ ಭರವಸೆಗೆ ಆಧಾರವಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೇನಾದಂಡನಾಯಕನು ಅವರಿಗೆ, “ಮಹಾರಾಜನಾದ ಅಶ್ಶೂರದ ಅರಸನು ಹಿಜ್ಕೀಯನಿಗೆ ಹೇಳುವುದನ್ನು ನೀವು ಹೋಗಿ ಅವನಿಗೆ ತಿಳಿಸಿರಿ. ಅವನು ಹೇಳುವುದೇನೆಂದರೆ: “‘ನೀನು ಯಾವುದರ ಮೇಲೆ ಭರವಸವಿಟ್ಟಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “ ‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:4
17 ತಿಳಿವುಗಳ ಹೋಲಿಕೆ  

ಇವರು ಗುಣುಗುಟ್ಟುವವರೂ ತಮ್ಮ ಗತಿಯನ್ನು ನಿಂದಿಸುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಬರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ಗರ್ವದಿಂದ ಭಂಗ; ಉಬ್ಬಿನಿಂದ ದೊಬ್ಬು.


ನನ್ನ ವಿರೋಧಿಗಳು - ನಿನ್ನ ದೇವರು ಎಲ್ಲಿ ಎಂದು ಯಾವಾಗಲೂ ನನ್ನನ್ನು ಗೇಲಿಮಾಡುವದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.


ನಿನ್ನ ದೇವರು ಎಲ್ಲಿ ಎಂದು ಜನರು ಯಾವಾಗಲೂ ನನ್ನನ್ನು ಗೇಲಿ ಮಾಡುವದರಿಂದ ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.


ಅವರ ಮುಖಾಂತರವಾಗಿ ಅವನಿಗೆ - ನೀನು ನಂಬುವ ದೇವರು - ನಾನು ಯೆರೂಸಲೇಮನ್ನು ಅಶ್ಶೂರದ ಅರಸನ ಕೈಗೆ ಒಪ್ಪಿಸುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.


ಇವನು ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಮುಂಚೆಯೂ ತರುವಾಯವೂ ಇರಲಿಲ್ಲ.


ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಯೆರೂಸಲೇವಿುನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇವಿುಗೆ ಬಂದು ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು ಎಂದು ನೀವು ಅಂದುಕೊಳ್ಳುವದು ಹೇಗೆ? ಮೋವಾಬು ಹಾಳಾಗಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು