Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:6 - ಕನ್ನಡ ಸತ್ಯವೇದವು J.V. (BSI)

6 ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “‘ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಆಧಾರ ಮಾಡಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟ್ ಎಂಬ ಊರುಗೋಲಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಆದರೆ ಅದು ಊರಿಕೊಳ್ಳುವವನ ಕೈಯನ್ನು ಚುಚ್ಚಿ ತಿವಿಯುವ ಕೋಲು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈಜಿಪ್ಟು ನಿನಗೆ ಸಹಾಯ ಮಾಡುವುದೆಂದು ನಂಬಿರುವಿಯಾ? ಈಜಿಪ್ಟು ಒಂದು ಮುರಿದ ದಂಟು. ಅದರ ಮೇಲೆ ನೀನು ಭಾರಹಾಕಿದರೆ ಅದು ನಿನ್ನ ಅಂಗೈಯಲ್ಲಿ ರಂಧ್ರಮಾಡುವುದು. ಈಜಿಪ್ಟಿನ ರಾಜನಾದ ಫರೋಹನ ಸಹಾಯಕ್ಕಾಗಿ ಆಶ್ರಯಿಸಿಕೊಂಡ ಯಾವ ಜನರೂ ಅವನಲ್ಲಿ ಭರವಸೆ ಇಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಗೋ! ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು. ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:6
12 ತಿಳಿವುಗಳ ಹೋಲಿಕೆ  

ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಮಾಂಸಮಯವೇ, ಆತ್ಮವಲ್ಲ; ಯೆಹೋವನು ಕೈಚಾಚುವಾಗ ಸಹಾಯ ಮಾಡಿದವನು ಮುಗ್ಗರಿಸುವನು, ಸಹಾಯಪಡೆದವನು ಬಿದ್ದು ಹೋಗುವನು, ಅಂತು ಎಲ್ಲರೂ ಒಟ್ಟಿಗೆ ಲಯವಾಗುವರು.


ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ! ಐಗುಪ್ತದ ಅರಸನಾದ ಫರೋಹನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವದು.


ಕೆಲವು ವರುಷಗಳಾದನಂತರ ಇವನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆ ಹೋದದರಿಂದಲೂ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.


ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನವನನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತನಲ್ಲ;


ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು ಮುರುಕಹಲ್ಲು, ಜಾರುವ ಕಾಲು.


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸಪಡುತ್ತಾರೆ; ಆದರೆ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೆ ದೃಷ್ಟಿಯಿಡುವದಿಲ್ಲ, ಯೆಹೋವನನ್ನು ಆಶ್ರಯಿಸುವದಿಲ್ಲ;


ಫರೋಹನೂ ಅವನ ಮಹಾಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹುಜನರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಹಾಕಿ ಬುರುಜುಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗದು.


ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸವಾಗದು; ಮತ್ತು ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲ್ಯರಲ್ಲಿ ಐಗುಪ್ತದಿಂದ ಇನ್ನು ಹುಟ್ಟದು. ನಾನೇ ಯೆಹೋವನು ಎಂದು ಅವರಿಗೆ ಮನದಟ್ಟಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು