Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:9 - ಕನ್ನಡ ಸತ್ಯವೇದವು J.V. (BSI)

9 ಇದೂ ನಿನಗೆ ಅಸಾಧ್ಯವಾಗುವದಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವದು ಹೇಗೆ? ರಥಾಶ್ವಬಲಗಳಿಗಾಗಿ ಐಗುಪ್ತ್ಯರನ್ನು ನಂಬಿರುತ್ತೀಯೆಂದು ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೀಗಿದ್ದರೂ ನನ್ನ ಒಡೆಯನ ಸೈನ್ಯಾಧಿಕಾರಿಗಳಲ್ಲಿ ಕನಿಷ್ಠನಾದವನನ್ನು ಸೋಲಿಸಲು ನಿಮ್ಮಿಂದಾಗದು. ಆದ್ದರಿಂದ ನೀವು ಈಜಿಪ್ಟಿನವರ ಅಶ್ವದಳದ ಮೇಲೆ ಯಾಕೆ ಭರವಸವಿಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಾಗದಿದ್ದರೆ ನನ್ನ ಯಜಮಾನನ ಸೇವಕರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯನ್ನು ಹೇಗೆ ಎದುರಿಸುತ್ತೀ? ನೀನು ರಥಗಳಿಗೋಸ್ಕರವೂ, ರಾಹುತರಿಗೋಸ್ಕರವೂ ಈಜಿಪ್ಟಿನ ಮೇಲೆ ಭರವಸೆ ಇಟ್ಟಿದ್ದೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:9
13 ತಿಳಿವುಗಳ ಹೋಲಿಕೆ  

ಅದು ಅಂದುಕೊಳ್ಳುವದೇನಂದರೆ - ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೆ.


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಅತ್ತಿತ್ತ ಹೋಗುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವದು.


ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಮಾಂಸಮಯವೇ, ಆತ್ಮವಲ್ಲ; ಯೆಹೋವನು ಕೈಚಾಚುವಾಗ ಸಹಾಯ ಮಾಡಿದವನು ಮುಗ್ಗರಿಸುವನು, ಸಹಾಯಪಡೆದವನು ಬಿದ್ದು ಹೋಗುವನು, ಅಂತು ಎಲ್ಲರೂ ಒಟ್ಟಿಗೆ ಲಯವಾಗುವರು.


ಐಗುಪ್ತದ ಸಹಾಯವು ವ್ಯರ್ಥವೇ ವ್ಯರ್ಥ; ಆದದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.


ಆಗ [ನನ್ನ ಜನರು] ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿವಿುತ್ತವಾಗಿಯೂ ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.


ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.


ಇದೂ ನಿನಗೆ ಅಸಾಧ್ಯವಾಗುವದಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವದು ಹೇಗೆ? ರಥಾಶ್ವಬಲಗಳ ವಿಷಯವಾಗಿ ಐಗುಪ್ತ್ಯರನ್ನು ನಂಬಿರುತ್ತೀಯೆಂದು ಕಾಣುತ್ತದೆ.


ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.


ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯ ಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು - ಇಸ್ರಾಯೇಲ್ಯರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರೋಧವಾಗಿ ಕರತಂದಿದ್ದಾನೆ ಅಂದುಕೊಂಡು


ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಪಂಥಹಾಕುವದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ; ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು