Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:14 - ಕನ್ನಡ ಸತ್ಯವೇದವು J.V. (BSI)

14 ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹಿಜ್ಕೀಯನು ಆ ದೂತರ ಕೈಗಳಿಂದ ಪತ್ರಗಳನ್ನು ತೆಗೆದುಕೊಂಡು ಓದಿದನು. ಅನಂತರ ನೇರವಾಗಿ ಯೆಹೋವನ ಆಲಯಕ್ಕೆ ಹೋಗಿ ಆ ಪತ್ರವನ್ನು ಯೆಹೋವನ ಮುಂದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:14
16 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟು ಆತನಿಗೆ -


ಆಗ ಹಿಜ್ಕೀಯನು ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.


ಕೈಯೊಡ್ಡಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ.


ದೇವರೇ, ವಿರೋಧಿಗಳು ಇನ್ನೆಲ್ಲಿಯತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?


ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಾಗ್ರದಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವನು.


ಆತನು ಅವನಿಗೆ - ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.


ವ್ಯಾಧಿಯಿಂದಾಗಲಿ ಬಾಧೆಯುಂಟಾಗುವಲ್ಲಿ ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲ್ಯರಾಗಲಿ ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುವದಾದರೆ


ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್‍ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವನು ನೀನೇ.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬೀ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.


ಆತನಿಗೆ - ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ, ಭೂಲೋಕಗಳನ್ನುಂಟು ಮಾಡಿದವನು ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು