ಯೆಶಾಯ 37:2 - ಕನ್ನಡ ಸತ್ಯವೇದವು J.V. (BSI)2 ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ವೃದ್ಧಯಾಜಕರು ಇವರನ್ನು ಕರಿಸಿ - ನೀವು ಗೋಣೀತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ : “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹಿಜ್ಕೀಯನು ಅರಮನೆಯ ಅಡಳಿತಗಾರನಾದ ಎಲ್ಯಾಕೀಮನನ್ನು, ಕಾರ್ಯದರ್ಶಿಯಾದ ಶೆಬ್ನನನ್ನು ಯಾಜಕರ ಹಿರಿಯರೊಂದಿಗೆ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಕಳುಹಿಸಿದನು. ಇವರು ತಮ್ಮ ಮನಸ್ಸಿನ ದುಗುಡವನ್ನು ಪ್ರದರ್ಶಿಸುವಂತೆ ಶೋಕವಸ್ತ್ರಗಳನ್ನು ಧರಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |