Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:26 - ಕನ್ನಡ ಸತ್ಯವೇದವು J.V. (BSI)

26 ಇದನ್ನು ನೀನು ಕೇಳಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು; ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಆದರೆ ದೇವರು ಏನು ಹೇಳುತ್ತಾನೆಂದು ಕೇಳಿದೆಯಾ? ಬಹುಕಾಲದ ಹಿಂದೆ ನಾನು ಯೋಜನೆಯನ್ನು ಮಾಡಿದ್ದೆನು. ಪ್ರಾಚೀನ ಕಾಲದಿಂದ ಅದರ ವಿಷಯವಾಗಿ ಆಲೋಚನೆ ಮಾಡಿದ್ದೆನು. ಈಗ ಅದು ನೆರವೇರುವಂತೆ ಮಾಡಿದ್ದೇನೆ. ಬಲಿಷ್ಠವಾದ ನಗರಗಳನ್ನು ನಾಶಮಾಡಿ ಅವುಗಳನ್ನು ಕಲ್ಲಿನ ರಾಶಿಗಳನ್ನಾಗಿ ಮಾಡಲು ನಿನ್ನನ್ನು ಬಿಟ್ಟಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:26
17 ತಿಳಿವುಗಳ ಹೋಲಿಕೆ  

ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಆಡಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಎತ್ತಿಕೊಂಡವನನ್ನು ಕೋಲು ಬೀಸಿದಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.


ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ?


ಇನ್ನು ಯಾವನೂ ಅಲ್ಲ, ನಾನು ಬೆಳಕಿಗೂ ಕತ್ತಲಿಗೂ ಸೃಷ್ಟಿಕರ್ತನು, ಮೇಲನ್ನೂ ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಯಿಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.


ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.


ಆದರೆ ದೇವರು ಮೇಲಾಗಬೇಕೆಂದು ಸಂಕಲ್ಪಿಸಿದನು. ಈಗ ಅನುಭವಕ್ಕೆ ಬಂದ ಪ್ರಕಾರವೇ ಅನೇಕ ಪ್ರಾಣಿಗಳಿಗೆ ಸಂರಕ್ಷಣೆಯುಂಟಾಗುವಂತೆ ಮಾಡಿದನು.


ದಮಸ್ಕದ ವಿಷಯವಾದ ದೈವೋಕ್ತಿ. ಆಹಾ ದಮಸ್ಕವು ಇನ್ನು ಊರಾಗಿರದೆ ಹಾಳು ದಿಬ್ಬವಾಗುವದು.


ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂವಿುಯು ಸ್ಥಾಪಿತವಾದಂದಿನಿಂದ ನೀವು ಗ್ರಹಿಸುತ್ತಿಲ್ಲವೋ?


ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ ಭೂವಿುಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ; ಆತನು ದಣಿದು ಬಳಲುವದಿಲ್ಲ; ಆತನ ವಿವೇಕವು ಪರಿಶೋಧನೆಗೆ ಅಗಮ್ಯ.


ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದಿರಿ; ಆದರೆ ಇದನ್ನೆಲ್ಲಾ ನಡಿಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು