ಯೆಶಾಯ 37:27 - ಕನ್ನಡ ಸತ್ಯವೇದವು J.V. (BSI)27 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ [ಒಣಗಿ ಹೋದ] ಪೈರಿಗೂ ಸಮಾನರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಬಲವಿಲ್ಲದವರಾದರು ಆ ನಗರವಾಸಿಗಳು ನನ್ನ ನಿಮಿತ್ತವೆ, ಸಮಾನರಾದರು ಹೊಲದ ಸಸಿಗೆ, ಎಳೆಗರಿಕೆಗೆ, ಮಾಳಿಗೆ ಮೇಲಿನ ಹುಲ್ಲಿಗೆ. ಬೆಳೆಯುವುದಕ್ಕೆ ಮೊದಲೆ ತುತ್ತಾದರು ಬಿರುಗಾಳಿಯ ಹೊಡೆತಕ್ಕೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆ ಪಟ್ಟಣಗಳಲ್ಲಿದ್ದ ಜನರು ನಿಸ್ಸಹಾಯಕರಾದರು ಮತ್ತು ಬಲಹೀನರಾದರು. ಅವರು ಹೆದರಿ ಗಲಿಬಿಲಿಗೊಂಡಿದ್ದರು. ಅವರು ಹೊಲದ ಹುಲ್ಲಿನಂತೆಯೂ ಸಸಿಗಳಂತೆಯೂ ಕಡಿದುಹಾಕಲ್ಪಡಲಿದ್ದಾರೆ. ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದಾರೆ. ಅವು ಉದ್ದವಾಗಿ ಬೆಳೆಯುವ ಮೊದಲೇ ಸಾಯುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ. ಅಧ್ಯಾಯವನ್ನು ನೋಡಿ |