ಯೆಶಾಯ 37:36 - ಕನ್ನಡ ಸತ್ಯವೇದವು J.V. (BSI)36 ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆ ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು. ಅಧ್ಯಾಯವನ್ನು ನೋಡಿ |
ಮೂರುವರುಷಗಳ ಕಾಲ ಬರವು ಉಂಟಾಗಬೇಕೋ, ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಕತ್ತಿಗೆ ಬಲಿಯಾಗುವದು ಬೇಕೋ, ಇಲ್ಲವೆ ಇಸ್ರಾಯೇಲ್ಯರ ಸಮಸ್ತಪ್ರಾಂತಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರಕದೂತನಿಂದುಂಟಾಗುವ ಮೂರು ದಿನಗಳ ಘೋರ ವ್ಯಾಧಿ ರೂಪವಾದ ಯೆಹೋವನ ಕತ್ತಿಯುಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ ಎಂಬದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು ಎಂದು ಹೇಳಿದನು.