Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:37 - ಕನ್ನಡ ಸತ್ಯವೇದವು J.V. (BSI)

37 ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅಶ್ಶೂರದ ಅರಸನಾದ ಸನ್ಹೇರೀಬನು ನಿನೆವೆಗೆ ಹಿಂದಿರುಗಿ ಅಲ್ಲಿಯೇ ಉಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:37
15 ತಿಳಿವುಗಳ ಹೋಲಿಕೆ  

ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾ ಪಟ್ಟಣವಾಗಿತ್ತು.


ನೀನೆದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಗಟ್ಟಿಯಾಗಿ ಕೂಗುತ್ತಾ ಅದನ್ನು ಖಂಡಿಸು; ಅದರ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂದು ಅಪ್ಪಣೆಮಾಡಿದನು.


ನ್ಯಾಯವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಹೇಳುವರು; ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ದೇವರಕಡೆಗೆ ತಿರುಗಿಕೊಂಡರು; ಆದರೆ ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ.


ನಿನೆವೆಯ ವಿಷಯವಾದ ದೈವೋಕ್ತಿ. ಎಲ್ಕೋಷ್ ಊರಿನ ನಹೂಮನಿಗೆ ಆದ ದೈವದರ್ಶನದ ಗ್ರಂಥ.


ಇಂಥ ಗಿಡಕ್ಕಾಗಿ ನೀನು ಕನಿಕರಪಟ್ಟಿರುವಲ್ಲಿ ಎಡಗೈ ಬಲಗೈ ತಿಳಿಯದ ಒಂದು ಲಕ್ಷ ಇಪ್ಪತ್ತು ಸಾವಿರ ನರಪ್ರಾಣಿಗಳೂ ಬಹು ಪಶುಗಳೂ ಉಳ್ಳ ಆ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ ಅಂದನು.


ನೀನು ನನಗೆ ವಿರೋಧವಾಗಿ ಕುಪಿತನಾಗಿರುವದೂ ಉಬ್ಬಿಕೊಂಡಿರುವದೂ ನನಗೆ ತಿಳಿದುಬಂತು. ಆದದರಿಂದ ನಿನಗೆ ಮೂಗುದಾರವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ.


ಇಗೋ, ನಾನು ಅವನ ಮೇಲೆ [ಭಯದ] ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬೀ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ ಎಂಬದಾಗಿ ಉತ್ತರಕೊಟ್ಟನು.


ಅವರ ಶರಣನು ಭಯದಿಂದ ಹೋಗಿಬಿಡುವನು; ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇವಿುನಲ್ಲಿ ಒಲೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.


ಅವರ ಕತ್ತಿಯು ಅಶ್ಶೂರ ದೇಶವನ್ನು ತಿಂದುಬಿಡುವದು, ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು; ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ ನಮ್ಮ ಪ್ರಾಂತವನ್ನು ತುಳಿದುಹಾಕುವಾಗ [ಆ ಸಮಾಧಾನಪ್ರದನು] ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.


ಯೆಹೋವನು ಬಡಗಲಿಗೆ ಕೈಚಾಚಿ ಅಶ್ಶೂರವನ್ನು ಧ್ವಂಸಪಡಿಸುವನು; ನಿನೆವೆಯನ್ನು ಹಾಳುಮಾಡಿ ಮರುಭೂವಿುಯಂತೆ ಒಣಗಿಸಿಬಿಡುವನು.


ಹಿಜ್ಕೀಯನು ಅದನ್ನು ಕೇಳಿ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.


ಈ ಭಕ್ತಿಕಾರ್ಯಗಳಾದನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆಹಾಕಿದನು.


ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು, ಅದು ಮನುಷ್ಯರ ಕತ್ತಿಯಲ್ಲ; ಖಡ್ಗವು ಅವರನ್ನು ನುಂಗುವದು, ಅದು ಮಾನವಖಡ್ಗವಲ್ಲ; ಅವರು ಕತ್ತಿಯ ಕಡೆಯಿಂದ ಓಡುವರು, ಅವರ ಯೌವನಸ್ಥರು ಬಿಟ್ಟಿಹಿಡಿಯಲ್ಪಡುವರು.


ನಿಮಗೆ ತಿಳಿಯಲಾಗದ ಅನ್ಯಭಾಷೆಯನ್ನೂ ನೀವು ಗ್ರಹಿಸಲಾರದ ತೊದಲುಮಾತುಗಳನ್ನೂ ಆಡುವ ಆ ಕ್ರೂರಜನರನ್ನು ಕಾಣದೆ ಇರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು