ಯೆಶಾಯ 38:12 - ಕನ್ನಡ ಸತ್ಯವೇದವು J.V. (BSI)12 ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು, ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ. ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕುರುಬನು ತನ್ನ ಗುಡಿಸಲನ್ನು ಕಿತ್ತುಹಾಕುವಂತೆ ನೇಯಿಗೆಯವನು ತನ್ನ ಹಾಸನ್ನು ಸುತ್ತುವಂತೆ ಮಗ್ಗದಿಂದ ಅವನು ದಾರವನ್ನು ಕತ್ತರಿಸುವಂತೆ ಬೆಳಗುಬೈಗಿನೊಳಗೆ ನನ್ನ ಆಯುಷ್ಯವನ್ನು ನೀ ಮುಗಿಸುತ್ತಿರುವೆನೆಂದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನನ್ನ ಮನೆಯು ಅಂದರೆ ನನ್ನ ಕುರುಬನ ಗುಡಾರವು ಕೀಳಲ್ಪಟ್ಟು ನನ್ನಿಂದ ತೆಗೆಯಲ್ಪಡುತ್ತಿದೆ. ಒಬ್ಬನು ಮಗ್ಗದಲ್ಲಿ ಬಟ್ಟೆಯನ್ನು ಸುತ್ತಿ ಕತ್ತರಿಸಿಬಿಡುವಂತೆ ನಾನು ಕತ್ತರಿಸಲ್ಪಟ್ಟಿದ್ದೇನೆ. ನನ್ನ ಆಯುಷ್ಯವನ್ನು ಚಿಕ್ಕ ವಯಸ್ಸಿನಲ್ಲಿಯೇ ಮುಗಿಸಿಬಿಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು ನನ್ನ ಕಡೆಯಿಂದ ಒಯ್ಯಲಾಗಿದೆ. ದೇವರು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಹಗಲುರಾತ್ರಿ ದೇವರೇ, ನೀವು ನನ್ನನ್ನು ಅಂತ್ಯಗೊಳಿಸುತ್ತೀರಿ. ಅಧ್ಯಾಯವನ್ನು ನೋಡಿ |