Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:14 - ಕನ್ನಡ ಸತ್ಯವೇದವು J.V. (BSI)

14 ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಹೊಣೆಯಾಗು ಎಂದು ಮೇಲೆ ಮೇಲೆ ದೃಷ್ಟಿಸುತ್ತಾ ಕಂಗೆಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಬಾನಕ್ಕಿಯಂತೆಯೂ, ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಆಶ್ರಯವಾಗು ಎಂದು ನಿನ್ನನು ದೃಷ್ಟಿಸುತ್ತಾ ಕಂಗೆಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕಿಚುಗುಟ್ಟಿದೆ ನಾ ಬಾನಕ್ಕಿ-ಬಕಗಳಂತೆ ಗುಬ್ಬಳಿಸಿದೆ ನಾ ಪಾರಿವಾಳದಂತೆ ಕಂಗೆಟ್ಟೆ, ನಾ ಮೇಲೆ ಮೇಲಕ್ಕೆ ನೋಡುತಾ ಸರ್ವೇಶ್ವರಾ, ನಾನಿರುವೆ ಬಾಧೆಪಡುತಾ ನೀ ಎನಗೆ ನೆರವಾಗಲು ಬಾ ಎನ್ನುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಪಾರಿವಾಳದಂತೆ ಕೂಗಿಕೊಂಡೆನು. ಪಕ್ಷಿಯಂತೆ ಅರಚಿಕೊಂಡೆನು. ನನ್ನ ಕಣ್ಣುಗಳು ಸ್ವರ್ಗದ ಕಡೆಗೆ ನೋಡುತ್ತಾ ಆಯಾಸಗೊಂಡವು. ನನ್ನ ಒಡೆಯನೇ, ನಾನು ತುಂಬಾ ಚಿಂತಾಕ್ರಾಂತನಾಗಿದ್ದೇನೆ. ನೀನು ನನಗೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಬಾನಕ್ಕಿಯಂತೆಯೂ, ಬಕದಂತೆಯೂ ಕೀಚುಗುಟ್ಟಿದೆನು. ಪಾರಿವಾಳದಂತೆ ಗುಬ್ಬಳಿಸುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವುದರಿಂದ ಕ್ಷೀಣವಾದವು. ಕರ್ತದೇವರೇ, ನಾನು ಬಾಧೆಪಡುತ್ತಿದ್ದೇನೆ, ನೀವು ನನಗೆ ಆಶ್ರಯರಾಗಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:14
15 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮೂಲುಗುತ್ತಲೇ ಇದ್ದೇವೆ; ನಾವು [ಯೆಹೋವನ] ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ಸಿಕ್ಕದು, [ಆತನ] ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರ.


ಮೊರೆಯಿಟ್ಟಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ದೃಷ್ಟಿ ಮಂದವಾಯಿತು.


ವಸ್ತ್ರವನ್ನು ಕಿತ್ತು ರಾಣಿಯನ್ನು ಬೈಲಿಗೆ ತರಲು ಆಕೆಯ ತೊತ್ತುಗಳು ಎದೆಬಡಿದುಕೊಂಡು ಪಾರಿವಾಳಗಳಂತೆ ಮೂಲುಗುತ್ತಾರೆ.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು ತಮ್ಮ ಅಧರ್ಮದಲ್ಲಿಯೇ ಇದ್ದು ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಮೊರೆಯಿಡುತ್ತಿರುವರು.


ನಾನು ನರಿಗಳ ತಮ್ಮನೂ ಉಷ್ಟ್ರಪಕ್ಷಿಗಳ ಗೆಳೆಯನೂ ಆಗಿದ್ದೇನೆ.


ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಕೋವರದಲ್ಲಿ ಕಾದುಕೊಂಡಿದ್ದೇವಲ್ಲಾ.


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.


ನಿನ್ನ ನುಡಿಯನ್ನು ನೆರವೇರಿಸಿ ಯಾವಾಗ ನನ್ನನ್ನು ಸಂತೈಸುವಿ ಎಂಬದಕ್ಕೋಸ್ಕರವೇ ನನ್ನ ದೃಷ್ಟಿ ಮಂದವಾಯಿತು.


ಕೃಪೆಮಾಡಿ ಈಡನ್ನು ಕೊಡು, ನನಗಾಗಿ ನೀನೇ ನಿನ್ನ ಹತ್ತಿರ ಹೊಣೆಯಾಗು, ಕೈ ಮೇಲೆ ಕೈ ಹಾಕತಕ್ಕವರು ನನಗೆ ಇನ್ನಾರೂ ಇಲ್ಲ.


ಯೇಸು ಆಣೆಯೊಡನೆಯೇ ಯಾಜಕನಾದದರಿಂದ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.


ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.


ಪುರಾತನಕಾಲದಿಂದ ನಿನೆವೆಯು ನೀರು ತುಂಬಿದ ಕೆರೆಯಂತೆ ಇರುತ್ತದೆ; ಆಹಾ, [ಒಡೆದು ಓಡುವ ನೀರಿನಂತೆ ಅದರ ನಿವಾಸಿಗಳು] ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ [ಎಂದು ಅಪ್ಪಣೆಯಾದರೂ] ಯಾರೂ ಹಿಂದೆ ನೋಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು