Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪುಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಯೆಹೋವನೇ, ನಾನು ನಿನಗೆ ಪೂರ್ಣಹೃದಯದಿಂದ ನಂಬಿಗಸ್ತನಾಗಿ ಸೇವೆಮಾಡಿದ್ದನ್ನು ಜ್ಞಾಪಿಸಿಕೋ. ನಿನಗೆ ಇಷ್ಟವಾದದ್ದನ್ನೆಲ್ಲ ನಾನು ಮಾಡಿದ್ದೇನೆ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:3
40 ತಿಳಿವುಗಳ ಹೋಲಿಕೆ  

ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.


ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು [ನಿನ್ನ ಪುಸ್ತಕದಿಂದ] ಅಳಿಸಿಬಿಡಬೇಡ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ - ಇಗೋ ಇವನು ನಿಜವಾದ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.


ಆಮೇಲೆ ನಾನು ಲೇವಿಯರಿಗೆ - ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಲುಗಳನ್ನು ಕಾಯಬೇಕು ಎಂದು ಆಜ್ಞಾಪಿಸಿದೆನು. ನನ್ನ ದೇವರೇ ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿನ್ನ ಮಹಾಕೃಪೆಗನುಸಾರವಾಗಿ ನನ್ನನ್ನು ಕನಿಕರಿಸು.


ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನೂ ನನ್ನ ಹಿತಕ್ಕಾಗಿ ನೆನಪು ಮಾಡಿಕೋ.


ಯೆಹೋವನ ದೃಷ್ಟಿಗೆ ಯಾವದು ನ್ಯಾಯವೂ ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವದು, ಮತ್ತು ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟು


ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾನಿಯಮವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು ಎಂಬದೇ.


ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು; ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯೂ ಕಂಡು ಅಲ್ಲಿ ನಮ್ಮೊಡನೆ ಮಾತಾಡಿದನು;


ನನ್ನ ಮನಸ್ಸು ನಿನ್ನ ನಿಬಂಧನೆಗಳಲ್ಲಿ ಆಸಕ್ತವಾಗಲಿ; ಆಗ ನನ್ನ ಆಶಾಭಂಗಕ್ಕೆ ಕಾರಣವಿರುವದಿಲ್ಲ.


ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ವಿುಶ್ರವಾಯಿತು.


ಯೆಹೋವನು ಯಾವನ ಲೆಕ್ಕಕ್ಕೆ ಅಪರಾಧವನ್ನು ಎಣಿಸುವದಿಲ್ಲವೋ ಯಾವನ ಹೃದಯದಲ್ಲಿ ಕಪಟವಿರುವದಿಲ್ಲವೋ ಅವನು ಧನ್ಯನು.


ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥಹೃದಯದಿಂದಲೇ ಪ್ರವರ್ತಿಸುವೆನು.


ನಿನ್ನ ಕೃಪೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.


ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿಗೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಎಂದಿಗೂ ಕದಲುವದಿಲ್ಲ.


ನೇವಿುತ ಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪು ಮಾಡಿಕೋ.


ನಾನು ಈ ವರ್ತಮಾನವನ್ನು ಕೇಳಿದಾಗ ನೆಲದ ಮೇಲೆ ಕೂತುಕೊಂಡು ಅತ್ತೆನು; ಕೆಲವು ದಿವಸಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.


ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ ಪಾಪನಿವೇದನವನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲ್ಯರ ಗಂಡಸರೂ ಹೆಂಗಸರೂ ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಅಲ್ಲಿನ ಜನರು ಬಹಳವಾಗಿ ಅಳುತ್ತಿದ್ದರು.


ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ಅವರು ಪೂರ್ಣಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಯೆಹೋವನಿಗೆ ಕಾಣಿಕೆ ಕೊಟ್ಟದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.


ಮತ್ತು ಯೆಹೋವನು - ನಿನ್ನ ಸಂತಾನದವರು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವದರಲ್ಲಿ ಜಾಗರೂಕರಾಗಿರುವದಾದರೆ ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ನೋಹನ ಚರಿತ್ರೆಯು - ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ತಪ್ಪಿಲ್ಲದವನೂ ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.


ಇವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಯೆಹೋವನಿಗೆ ನಡೆದುಕೊಂಡನು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ನಾನು ನರನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.


ಇದನ್ನು ಕೇಳಿದೊಡನೆ ಹಿಜ್ಕೀಯನು ಮೋರೆಯನ್ನು ಗೋಡೆಯ ಕಡೆಗೆ ತಿರುಗಿಸಿ -


ಆಗ ಯೆಹೋವನು ಯೆಶಾಯನಿಗೆ -


ಇವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು