Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 4:1 - ಕನ್ನಡ ಸತ್ಯವೇದವು J.V. (BSI)

1 ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು; ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು; ನಮ್ಮ ಅವಮಾನವನ್ನು ನೀಗಿಸಿಬಿಡು ಎಂದು ಕೇಳಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ಕಾಲ ಬಂದಾಗ ಏಳುಮಂದಿ ಅವಿವಾಹಿತ ಮಹಿಳೆಯರು ಒಬ್ಬ ಪುರುಷನನ್ನು ಹಿಡಿದುಕೊಂಡು: “ನಾವು ಸ್ವಂತವಾಗಿ ದುಡಿದು ಊಟಮಾಡುತ್ತೇವೆ, ಸ್ವಂತವಾಗಿ ಸಂಪಾದನೆಮಾಡಿ ಬಟ್ಟೆ ಉಡುತ್ತೇವೆ. ನೀನು ನಮ್ಮ ಯಜಮಾನನೆನಿಸಿಕೊಂಡು ನಮ್ಮ ಮಾನವನ್ನು ಕಾಪಾಡಿದರೆ ಸಾಕು,” ಎಂದು ಕೋರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ದಿವಸದಲ್ಲಿ ಏಳುಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದು ಉಣ್ಣುವೆವು, ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು, ನಮ್ಮ ನಿಂದೆಯನ್ನು ನೀಗಿಸುವುದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು,” ಎಂದು ಕೇಳಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 4:1
15 ತಿಳಿವುಗಳ ಹೋಲಿಕೆ  

ಆಕೆಯು ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ ಅಂದಳು.


ಸಾಮಾನ್ಯರ ಗರ್ವವು ಕುಗ್ಗುವದು, ಮುಖಂಡರ ಅಹಂಕಾರವೂ ತಗ್ಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಮನುಷ್ಯರನ್ನು ಅಪರಂಜಿಗಿಂತಲೂ ಮಾನವರನ್ನು ಓಫೀರಿನ ಬಂಗಾರಕ್ಕಿಂತಲೂ ಅಪರೂಪವಾಗುವಂತೆ ಮಾಡುವೆನು.


ಯಾಕಂದರೆ ಬರೆದಿರುವದೆಲ್ಲಾ ನೆರವೇರುವದಕ್ಕಾಗಿ ಅವು ದಂಡನೆಯ ದಿವಸಗಳಾಗಿವೆ.


ಕರ್ತನು ಈ ಕಾಲದಲ್ಲಿ ನನ್ನನ್ನು ಪರಾಮರಿಸಿ ನನಗೆ ಈ ರೀತಿಯಾಗಿ ಮಾಡಿ ಜನರಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ ಅನ್ನುತ್ತಿದ್ದಳು.


ಇಂಥವರು ತಮ್ಮ ಕೆಲಸವನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.


ಆ ದಿನದಲ್ಲಿ ಜನರು ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆಯೂ ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸದೆಯೂ


ಆ ದಿನದಲ್ಲಿ ಇಸ್ರಾಯೇಲ್ಯರೊಳಗೆ ಉಳಿದವರು, ಯಾಕೋಬನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಯಥಾರ್ಥವಾಗಿ ಆಧಾರಮಾಡಿಕೊಳ್ಳುವರು.


ಇದಲ್ಲದೆ ಆಕೆಯ ಸವತಿಯು - ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.


ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಆ ದಿನದಲ್ಲಿ ಒಬ್ಬನು - ಎಲಾ, ಅಣ್ಣ, ನಿನಗೆ ನಿಲುವಂಗಿ ಇದೆ. ನೀನು ನಮಗೆ ಒಡೆಯನಾಗಬೇಕು, ಹಾಳಾದ ಈ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ತಂದೆಯ ಮನೆಯೊಳಗೆ ಅಣ್ಣನನ್ನು ಬಲವಂತ ಮಾಡಲು


ಹೆದರಬೇಡ, ನಿನಗೆ ಅವಮಾನವಾಗುವದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು; ಯುವಕರ ತಾಯಿಗಳ ಮೇಲೆ ಕೊಳ್ಳೆಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು; ಅವರ ಮೇಲೆ ಕಳವಳವನ್ನೂ ದಿಗಿಲನ್ನೂ ತಟ್ಟನೆ ಬೀಳಿಸುವೆನು.


ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವವರೆಗೂ ಮಕ್ಕಳೇ ಆಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು