ಯೆಶಾಯ 4:5 - ಕನ್ನಡ ಸತ್ಯವೇದವು J.V. (BSI)5 ಚೀಯೋನ್ ಪರ್ವತದ ಸಂಪೂರ್ಣ ಮಂದಿರದ ಮೇಲೆಯೂ ಅಲ್ಲಿನ ಕೂಟಗಳ ಮೇಲೆಯೂ ಹಗಲಲ್ಲಿ ಧೂಮಮೇಘವನ್ನು, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನು, ಉಂಟು ಮಾಡುವನು. [ಈ] ಪ್ರಭಾವದ ಮೇಲೆಲ್ಲಾ ಆವರಣವಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸಿಯೋನ್ ಪರ್ವತದ ಮೇಲೆಲ್ಲ, ಅಲ್ಲಿನ ಸಭಾಕೂಟಗಳ ಮೇಲೆಲ್ಲ ಹಗಲಲ್ಲಿ ಧೂಮಮೇಘವನ್ನು, ರಾತ್ರಿಯಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ದೇವರ ಮಹಿಮೆ ಛತ್ರಿಯಂತೆಯೂ ಚಪ್ಪರದಂತೆಯೂ ಎಲ್ಲರನ್ನು ಆವರಿಸುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ಸಮಯದಲ್ಲಿ ತಾನು ತನ್ನ ಜನರೊಂದಿಗೆ ಇರುವುದಾಗಿ ಹೀಗೆ ಯೆಹೋವನು ರುಜುವಾತುಪಡಿಸುವನು. ಹಗಲಲ್ಲಿ ಆತನು ಧೂಮಮೇಘವನ್ನೂ ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಗುರುತುಗಳು ಚೀಯೋನ್ ಪರ್ವತದ ಮೇಲಿರುವ ಪ್ರತಿಯೊಂದು ಜನರ ಸಭೆಯ ಮೇಲೆ ಆಕಾಶದಲ್ಲಿ ಕಾಣುವುದು. ಪ್ರತಿಯೊಬ್ಬನ ಮೇಲೆಯೂ ಕಾಪಾಡಿಕೊಳ್ಳುವುದಕ್ಕಾಗಿ ಹೊದಿಕೆ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಯೆಹೋವ ದೇವರು ಚೀಯೋನ್ ಪರ್ವತದ ಪ್ರತಿಯೊಂದು ನಿವಾಸದ ಮೇಲೂ, ಅದರ ಸಭೆಗಳ ಮೇಲೂ, ಹಗಲಿನಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಿನಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ಏಕೆಂದರೆ ದೇವರ ಮಹಿಮೆ ಎಲ್ಲದರ ಮೇಲೆ ಚಪ್ಪರದಂತೆಯೂ ಆವರಿಸುವುದು. ಅಧ್ಯಾಯವನ್ನು ನೋಡಿ |