ಯೆಶಾಯ 40:12 - ಕನ್ನಡ ಸತ್ಯವೇದವು J.V. (BSI)12 ಯಾವನು ಸಾಗರಸಮುದ್ರಗಳನ್ನು ಸೇರೆಯಿಂದ ಅಳತೆಮಾಡಿದನು? ಯಾವನು ಆಕಾಶಮಂಡಲದ ಪರಿಮಾಣವನ್ನು ಗೇಣಿನಿಂದ ನಿರ್ಣಯಿಸಿದನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ, ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಳೆವನಾರು ಸಮುದ್ರಸಾಗರಗಳನ್ನು ಬೊಗಸೆಗೈಯಿಂದ? ಮೊಳ ಹಾಕುವವನಾರು ಆಕಾಶಮಂಡಲವನ್ನು ಕೈಗೇಣಿನಿಂದ? ತುಂಬುವವನಾರು ಧರೆಯ ಮರಳನ್ನೆಲ್ಲಾ ಕೊಳಗದೊಳಗೆ? ತೂಗಿದವನಾರು ಬೆಟ್ಟಗುಡ್ಡಗಳನ್ನು ತ್ರಾಸುತಕ್ಕಡಿಯೊಳಗೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತನ್ನ ಅಂಗೈಯಿಂದ ಸಾಗರಗಳನ್ನು ಅಳತೆ ಮಾಡಿದವರ್ಯಾರು? ತನ್ನ ಹಸ್ತದಿಂದ ಆಕಾಶವನ್ನು ಅಳತೆ ಮಾಡಿದವರ್ಯಾರು? ಭೂಮಿಯ ಧೂಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಅಳೆದವರ್ಯಾರು? ಪರ್ವತಗಳನ್ನು ಮತ್ತು ಬೆಟ್ಟಗಳನ್ನು ಅಳೆಯಲು ಅಳತೆಕೋಲನ್ನು ಯಾರು ಉಪಯೋಗಿಸಿದರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸಮುದ್ರದ ನೀರನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ, ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ, ಭೂಮಿಯ ಧೂಳನ್ನು ಅಳತೆಮಾಡಿ ತಿಳಿದುಕೊಂಡವನೂ, ಬೆಟ್ಟಗಳ ಮಟ್ಟವನ್ನೂ, ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನೂ ಯಾರು? ಅಧ್ಯಾಯವನ್ನು ನೋಡಿ |