Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:2 - ಕನ್ನಡ ಸತ್ಯವೇದವು J.V. (BSI)

2 ಯೆರೂಸಲೇವಿುನ ಸಂಗಡ ಹೃದಯಂಗಮವಾಗಿ ಮಾತಾಡಿರಿ; ಅದಕ್ಕೆ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆರೂಸಲೇಮಿನ ಸಂಗಡ ನೀವು ಮೃದುವಾಗಿ ಮಾತನಾಡಿರಿ. ಅದರ ಕಠಿಣ ಸೇವೆ ತೀರಿತೆಂದೂ, ಅದರ ಪಾಪಕ್ಕೆ ಪ್ರಾಯಶ್ಚಿತ್ತವಾಗಿದೆ, ಎಂದು ಘೋಷಿಸಿರಿ, ಏಕೆಂದರೆ ಅದು ಎಲ್ಲಾ ಪಾಪಗಳಿಗೂ ಯೆಹೋವ ದೇವರ ಕೈಯಿಂದ ಎರಡರಷ್ಟು ಹೊಂದಿದ್ದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:2
54 ತಿಳಿವುಗಳ ಹೋಲಿಕೆ  

ಸುನಿರೀಕ್ಷೆಯುಂಟಾದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು [ಸುಖವನ್ನು] ದಯಪಾಲಿಸುವೆನು ಎಂದು ಈಗಲೂ ಪ್ರಕಟಿಸುತ್ತೇನೆ.


ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವಾಸ್ತ್ಯದಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವದು.


ಆಹಾ, ನಾನು ಅವಳನ್ನು ಒಲಿಸಿ ಅಡವಿಗೆ ಕರಕೊಂಡು ಹೋಗಿ ಅವಳೊಂದಿಗೆ ಹೃದಯಂಗಮವಾಗಿ ಮಾತಾಡುವೆನು.


ಇತರರಿಗೆ ಅವಳು ಮಾಡಿದ ಪ್ರಕಾರ ಅವಳಿಗೆ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ; ಅವಳು ಕಲಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿಕೊಡಿರಿ.


ಅವರ ಅಧರ್ಮಕ್ಕೂ ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ದೇಶವನ್ನು ಹೊಲಸು ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.


ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ, ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ಇವರಿಗೆ ಗತಿಯಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.


ಭಯಭ್ರಾಂತಹೃದಯರಿಗೆ - ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ದೈವಿಕ ಪ್ರತಿಫಲವನ್ನು ಕೊಡುವದಕ್ಕೂ ಬರುವನು; ತಾನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಹೇಳಿರಿ.


ಆತನು ಅವರಿಗೆ - ತಂದೆಯು ಸ್ವಂತ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ ಸಮಯಗಳನ್ನೂ ತಿಳುಕೊಳ್ಳುವದು ನಿಮ್ಮ ಕೆಲಸವಲ್ಲ.


ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು; ಅದರಿಂದ ಜನರು ಶೋಧಿಸಲ್ಪಟ್ಟು ಶುದ್ಧಹೊಂದಿ ಶುಭ್ರರಾಗುವರು; ಅಂತ್ಯವು ಕ್ಲುಪ್ತಕಾಲದಲ್ಲೇ ಆಗುವದು.


ಆ ದಿನದಲ್ಲಿ ನೀನು ಹೇಳುವದೇನಂದರೆ - ಯೆಹೋವನೇ, ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀಯಲ್ಲವೆ.


ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು.


ಯೆಹೋವನು ಹೀಗನ್ನುತ್ತಾನೆ - ಶೂರನ ಸೆರೆಯವರೂ ಅಪಹರಿಸಲ್ಪಡುವರು, ಭೀಕರನ ಕೊಳ್ಳೆಯೂ ತೆಗೆಯಲ್ಪಡುವದು; ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.


ಚೀಯೋನಿನ ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು; ಅಲ್ಲಿಯ ಜನರ ಪಾಪವು ಪರಿಹಾರವಾಗುವದು.


ಯಾವನ ದ್ರೋಹವು ಪರಿಹಾರವಾಗಿದೆಯೋ ಯಾವನ ಪಾಪವು ಕ್ಷವಿುಸಲ್ಪಟ್ಟಿದೆಯೋ ಅವನೇ ಧನ್ಯನು.


ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನನಗೆ ಬಲು ಸಿಟ್ಟೇರಿದೆ; ನಾನು [ಯೆರೂಸಲೇವಿುನ ಮೇಲೆ] ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಿಸಬೇಕೆಂದಿದ್ದ ಕೇಡಿಗಿಂತ ಅವು ಹೆಚ್ಚಾಗಿ ಮಾಡಿದವಷ್ಟೆ.


ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.


ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು, ಅಂತ್ಯಕಾಲದವರೆಗೆ ಮರೆಯಾಗಿರಲಿ; ಬಹು ಜನರು ಅತ್ತಿತ್ತ ತಿರುಗುವರು, ತಿಳುವಳಿಕೆಯು ಹೆಚ್ಚುವದು.


[ಆಹಾ, ನಮ್ಮ ದೇವರು] ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇವಿುಗೆ ಆದಂಥ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ದಾನಿಯೇಲನಾದ ನಾನು ಶಾಸ್ತ್ರಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮು ಹಾಳುಬಿದ್ದಿರಬೇಕಾದ ಪೂರ್ಣಕಾಲದ ವರುಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದು


ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ; ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನು ಬೇಡ; ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತಭಂಗದಿಂದ ಅವರನ್ನು ನಾಶಪಡಿಸು.


ಹಿಜ್ಕೀಯನು ಯೆಹೋವನ [ಭಜನೆಯಲ್ಲಿ] ಗಟ್ಟಿಗರಾಗಿದ್ದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತಾಡಿದನು. ನೇಮಕವಾದ ಏಳು ದಿವಸಗಳವರೆಗೂ ಜನರು ಸಮಾಧಾನಯಜ್ಞಗಳನ್ನರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣ ಮಾಡಿದರು.


ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು; ಆ ಹುಡುಗಿಯನ್ನು ಮೋಹಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.


ನನ್ನ ಬಾಯಿಗೆ ಮುಟ್ಟಿಸಿ - ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು; ನಿನ್ನ ದೋಷವು ನೀಗಿತು, ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು ಅಂದನು.


ಮತ್ತು ಯೆಹೋವನು ನಿಮ್ಮ ಸಂಕಟದಿಂದಲೂ ಕಳವಳದಿಂದಲೂ ಕಠಿನವಾದ ಬಿಟ್ಟಿಯ ಸೇವೆಯಿಂದಲೂ


ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿವಿುತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನುಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿವಿುತ್ತ ಕೆಡವಲ್ಪಡುವರು.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು; ಯೆರೂಸಲೇವಿುನಲ್ಲೇ ನಿಮಗೆ ದುಃಖಶಮನವಾಗುವದು.


ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡಿಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!


ಚೀಯೋನೆಂಬ ಯುವತಿಯೇ, ನಿನ್ನ ದೋಷಫಲವೆಲ್ಲಾ ಅನುಭವಿಸಿ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು; ಎದೋಮೆಂಬ ಯುವತಿಯೇ, ನಿನ್ನ ದೋಷದ ನಿವಿುತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.


ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು ನನ್ನ ರೋಷವು ನಿನ್ನ ಕಡೆಯಿಂದ ತೊಲಗಿಬಿಡುವದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.


ನನಗೆ ವಿವರಿಸುವ ದೂತನಿಗೆ ಯೆಹೋವನು ಕರುಣೆಯ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.


ಸೂರ್ಯೋದಯವಾದನಂತರ ಒಬ್ಬನು ಕಳ್ಳನನ್ನು ಹೊಡೆದು ಕೊಂದರೆ ಅದು ನರಹತ್ಯವೇ ಸರಿ.) ಅವನು ಪೂರ್ತಿಯಾಗಿ ಸಲ್ಲಿಸಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ದಾಸನಾಗಿ ಮಾರಲ್ಪಡಬೇಕು.


ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದೀ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದೀ.


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿಮಾಡಿ ಅಶೇರವೆಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಇನ್ನು ಪ್ರತಿಷ್ಠಿಸದೆ ಹೋದರೆ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವದು, ಮತ್ತು ಅವರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದೇ.


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚತ್ತುಕೋ, ಎಚ್ಚತ್ತುಕೋ, ಎದ್ದು ನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದು ಬಿಟ್ಟಿದ್ದೀ.


ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನೀನು ನನ್ನನ್ನು ಇನ್ನು ಬಾಳೀ ಅನ್ನದೆ ಈಶೀ ಅನ್ನುವಿ.


ನಿನಗೆ ವಿಧಿಸಿದ ದಂಡನೆಗಳನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು