ಯೆಶಾಯ 40:20 - ಕನ್ನಡ ಸತ್ಯವೇದವು J.V. (BSI)20 [ಇಂಥದನ್ನು ದೇವರಿಗೆ] ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು ಹುಳಿತುಹೋಗದ ಮರವನ್ನು ಹುಡುಕಿ ಅಲುಗದ ವಿಗ್ರಹವನ್ನು ಮಾಡಿಸಲು ಕುಶಲನನ್ನು ವಿಚಾರಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 (ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು, ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇಷ್ಟು ಹಣವನ್ನು ವೆಚ್ಚ ಮಾಡಲಾಗದ ಬಡವನು ಹುಡುಕುವನು ಹುಳಿತುಹೋಗದ ಮರವನು ಬಾಗಿ ಬೀಳದ ವಿಗ್ರಹವನ್ನು ಮಾಡಬಲ್ಲಾ ಕುಶಲನನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. ಈ ಬಗೆಯ ಮರವು ಕೊಳೆತುಹೋಗುವದಿಲ್ಲ. ಆ ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. ಆ ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು ಹುಳಿತುಹೋಗದ ಮರವನ್ನು ಹುಡುಕಿ, ಬಾಗಿಬೀಳದ ವಿಗ್ರಹವನ್ನು ತಯಾರಿಸುವುದಕ್ಕೆ ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು. ಅಧ್ಯಾಯವನ್ನು ನೋಡಿ |
ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;