Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:6 - ಕನ್ನಡ ಸತ್ಯವೇದವು J.V. (BSI)

6 ಆಹಾ, ವಾಣಿಯು ಮತ್ತೆ ಕೇಳಿಸಿ - ಕೂಗು ಎನ್ನುತ್ತದೆ. ಅದಕ್ಕೆ ನಾನು - ಏನು ಕೂಗಲಿ ಎಂದು ಕೇಳಲು ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ವಾಣಿ ಮತ್ತೆ ಕೇಳಿಸಿತು : ‘ಗಟ್ಟಿಯಾಗಿ ಕೂಗು’ ಎಂದಿತು ನಾನೇನೆಂದು ಕೂಗಲಿ ಎನ್ನಲು ಈ ಪರಿಯಾಗಿ ಉತ್ತರಿಸಿತು : “ನರಮಾನವರೆಲ್ಲ ಬರೀ ಹುಲ್ಲಿನಂತೆ ಅವರ ಸೊಬಗೆಲ್ಲಾ ಬಯಲಿನ ಕುಸುಮದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಂದು ಸ್ವರವು “ಮಾತನಾಡು” ಎಂದಿತು. ಅದಕ್ಕೆ ಮನುಷ್ಯನು, “ಏನು ಮಾತಾಡಲಿ” ಅಂದನು. ಆಗ ಸ್ವರವು, “ಜನರು ಶಾಶ್ವತವಾಗಿ ಜೀವಿಸುವದಿಲ್ಲ, ಅವರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ಒಳ್ಳೆಯತನವು ಕಾಡುಹೂವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ವಾಣಿಯು, “ಗಟ್ಟಿಯಾಗಿ ಕೂಗು,” ಎಂದಿತು. ಅದಕ್ಕೆ, “ನಾನು ಏನೆಂದು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅವರ ಸೊಬಗೆಲ್ಲಾ ಹೊಲದ ಹೂವಿನಂತಿದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:6
17 ತಿಳಿವುಗಳ ಹೋಲಿಕೆ  

ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ; ನಾನು ಬಾಡಿದ ಹುಲ್ಲಿನಂತಿದ್ದೇನೆ.


ಹೂವಿನ ಹಾಗೆ ಅರಳಿ ಬಾಡುವನು, ನೆರಳಿನಂತೆ ನಿಲ್ಲದೆ ಓಡಿಹೋಗುವನು.


ಗಂಟಲೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ದನಿಗೈದು ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು, ಯಾಕೋಬವಂಶದವರಿಗೆ ಅವರ ಪಾಪಗಳನ್ನು ಅರುಹು.


ದುಷ್ಟರು ಹುಲ್ಲಿನಂತೆ ಬೆಳೆಯುವದೂ ಕೆಡುಕರು ಹೂವಿನಂತೆ ಮೆರೆಯುವದೂ ತೀರಾ ಹಾಳಾಗುವದಕ್ಕಾಗಿಯೇ.


ಒಂದು ದಿನವು ಬರುವದು, ಆಗ ಎಫ್ರಾಯೀವಿುನ ಗುಡ್ಡಗಳ ಮೇಲಿರುವ ಕಾವಲುಗಾರರು - ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ ಎಂದು ಕೂಗುವರು.


ನೀನು ಹೋಗಿ ಯೆರೂಸಲೇವಿುನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ನೀನು ಯೌವನದಲ್ಲಿ [ನನ್ನ ಮೇಲೆ] ಇಟ್ಟಿದ್ದ ಪ್ರೀತಿಯನ್ನೂ ವಿವಾಹ ಕಾಲದ ನಿನ್ನ ಪ್ರೇಮವನ್ನೂ ಬೀಜಬಿತ್ತಿಯೇ ಇಲ್ಲದ ಅರಣ್ಯದಲ್ಲಿ ನೀನು ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ಇಗೋ ಒಂದು ವಾಣಿ! - ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜ ಮಾರ್ಗವನ್ನು ನೆಟ್ಟಗೆ ಮಾಡಿರಿ;


ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ [ಒಣಗಿ ಹೋದ] ಪೈರಿಗೂ ಸಮಾನರಾದರು.


ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.


ಗಿಬ್ಯದಲ್ಲಿ ತುತೂರಿಯನ್ನೂದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತಾವೆನಿನಲ್ಲಿ ಆರ್ಭಟಿಸಿರಿ,


ನಾನೇ, ನಾನೇ ನಿನ್ನನ್ನು ಸಂತೈಸುವವನಾಗಿರುವಲ್ಲಿ ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಆಗ ಆ ದೂತನು ನನಗೆ ಈ ಅಪ್ಪಣೆಮಾಡಿದನು - ನೀನು ಹೀಗೆ ಸಾರು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಯೆರೂಸಲೇವಿುಗೂ ಚೀಯೋನಿಗೂ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು