ಯೆಶಾಯ 40:9 - ಕನ್ನಡ ಸತ್ಯವೇದವು J.V. (BSI)9 ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ಉನ್ನತಪರ್ವತವನ್ನು ಹತ್ತಿಕೋ; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ - ಇಗೋ, ನಿಮ್ಮ ದೇವರು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ, ಅದನ್ನು ಗಟ್ಟಿಯಾಗಿ ಸಾರು. ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಶುಭಸಮಾಚಾರವನ್ನು ತಿಳಿಸುವ ಚೀಯೋನೇ, ನೀನು ಉನ್ನತ ಪರ್ವತವನ್ನು ಏರು. ಶುಭಸಮಾಚಾರವನ್ನು ತಿಳಿಸುವ ಯೆರೂಸಲೇಮೇ, ಬಲವಾಗಿ ನಿನ್ನ ಧ್ವನಿ ಎತ್ತು, ಭಯಪಡಬೇಡ. ಯೆಹೂದದ ಪಟ್ಟಣಗಳಿಗೆ, “ಇಗೋ, ನಿನ್ನ ದೇವರು!” ಎಂದು ಹೇಳು. ಅಧ್ಯಾಯವನ್ನು ನೋಡಿ |