ಯೆಶಾಯ 41:10 - ಕನ್ನಡ ಸತ್ಯವೇದವು J.V. (BSI)10 ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ. ಅಧ್ಯಾಯವನ್ನು ನೋಡಿ |
ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.