Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:21 - ಕನ್ನಡ ಸತ್ಯವೇದವು J.V. (BSI)

21 ಯಾಕೋಬ್ಯರ ಅರಸನಾದ ಯೆಹೋವನು ಹೀಗನ್ನುತ್ತಾನೆ - ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾಕೋಬ್ಯರ ಅರಸನಾದ ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ವಿಗ್ರಹಗಳಿಗಾಗಿ ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯಕೋಬ್ಯರ ಅರಸನಾದ ಸರ್ವೇಶ್ವರ ಇಂತೆನ್ನುತ್ತಾರೆ : “ನಾಡದೇವತೆಗಳೇ, ಹೊರಗೆ ಬರಲಿ ನಿಮ್ಮ ವ್ಯಾಜ್ಯ ಸಾಬೀತಾಗಲಿ ನಿಮ್ಮ ನ್ಯಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾಕೋಬ್ಯರ ಅರಸನಾದ ಯೆಹೋವನು ಹೇಳುವುದೇನೆಂದರೆ: “ಬನ್ನಿ ನಿಮ್ಮ ವಾದಗಳನ್ನು ಮಂಡಿಸಿರಿ, ನಿಮ್ಮ ಆಧಾರಗಳನ್ನು ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ನಿಮ್ಮ ವ್ಯಾಜ್ಯವನ್ನು ತನ್ನಿರಿ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಬಲವಾದ ನ್ಯಾಯಗಳನ್ನು ತನ್ನಿರಿ,” ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:21
12 ತಿಳಿವುಗಳ ಹೋಲಿಕೆ  

ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.


ಪ್ರಭುವಿನಂತೆ ಆತನ ಸಾನ್ನಿಧ್ಯದಲ್ಲಿ ಪ್ರವೇಶಿಸಿ ನನ್ನ ಹೆಜ್ಜೆಗಳ ಲೆಕ್ಕವನ್ನು ಆತನಿಗೆ ಅರಿಕೆಮಾಡಿಕೊಳ್ಳುತ್ತಿದ್ದೆನು.


ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ಇಸ್ರಾಯೇಲ್ಯರ ಅರಸನೂ ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಆದಿ, ಅಂತವೂ ನಾನೇ; ನಾನು ಹೊರತು ಯಾವ ದೇವರೂ ಇಲ್ಲ.


ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.


ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ; ಜನಾಂಗಗಳು [ಎಷ್ಟಾದರೂ] ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತಾಡಲಿ; ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗುವ.


ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು [ಇವರ ಮಾತನ್ನು] ಕೇಳಿ ನಿಜವೆಂದು ಹೇಳಲಿ.


ನಾನು ಯೆಹೋವನು, ನಿಮ್ಮ ಸದಮಲಸ್ವಾವಿುಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ; ನನ್ನ ಸಂಕಲ್ಪವು ನಿಲ್ಲುವದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು